ಇತರೆ

14 ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ತಾಯಿ ಆತ್ಮಹತ್ಯೆ

Views: 49

ಕನ್ನಡ ಕರಾವಳಿ ಸುದ್ದಿ: 14 ವರ್ಷದ ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್ ಫೀಲ್ಡ್ ಬಳಿಯ ಇಮ್ಮಡಿಹಳ್ಳಿಯಲ್ಲಿ ನಡೆದಿದೆ.

ಮಗಳು ಕಾರುಣ್ಯ (14) ತಾಯಿ ಸುವರ್ಣ (40) ಮೃತ ದುರ್ದೈವಿಗಳು. ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿ ತಾಯಿ ಸುವರ್ಣ ಮೊದಲು ಕಾರಣ್ಯ ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 18 ವರ್ಷಗಳ ಹಿಂದೆ ಚಂದ್ರಶೇಖ‌ರ್ ಮತ್ತು ಸುವರ್ಣ ಮದುವೆಯಾಗಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದರು. ಮಗ ತುಮಕೂರಿನ ಹಾಸ್ಟೆಲ್‌ನಲ್ಲಿ ಓದುತ್ತಿದ್ದರೆ, ಮಗಳು ಕಾರುಣ್ಯ, ತಾಯಿ ಸುವರ್ಣ ಮತ್ತು ಚಂದ್ರಶೇಖರ್ ವೈಟ್‌ಫೀಲ್ಡ್ ಇಮ್ಮಡಿಹಳ್ಳಿಯಲ್ಲಿ ವಾಸವಾಗಿದ್ದರು. ಮಂಗಳವಾರ ಬೆಳಿಗ್ಗೆ ಪತಿ ಚಂದ್ರಶೇಖರ್ ಎಂದಿನಂತೆ ಕೆಲಸಕ್ಕೆ ತೆರಳಿದ್ದಾನೆ. ಬಳಿಕ ಪತ್ನಿ ಸುವರ್ಣಗೆ ಕರೆ ಮಾಡಿದ್ದಾನೆ, ಎಷ್ಟೇ ಬಾರಿ ಕರೆ ಮಾಡಿದರು ಸ್ವೀಕರಿಸದಿದ್ದಾಗ ಗಾಬರಿಗೊಂಡು ಮನೆಗೆ ಬಂದು ನೋಡಿದಾಗ ಮಗಳನ್ನು ಕೊಂದು ಬಳಿಯ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತ ಸುವರ್ಣ ಗಂಡ ಚಂದ್ರಶೇಖರ್‌ಗೆ ಇತ್ತೀಚೆಗೆ ಹಾರ್ಟ್ ಟ್ರಾನ್ಸೆಪ್ಟೆಂಟ್ ಆಗಿತ್ತು. ಖರ್ಚು ವೆಚ್ಚಕ್ಕೆ ಹಣಕಾಸು ಕೊರತೆ ಉಂಟಾಗಿತ್ತು ಎನ್ನಲಾಗಿದೆ. ಈ ಹಿನ್ನೆಲೆ ಮಾನಸಿಕವಾಗಿ ಕುಗ್ಗಿದ್ದ ಸುವರ್ಣ ಮಗಳನ್ನು ಕೊಂದು ತಾಯಿ ನೇಣಿಗೆ ಶರಣಾಗಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಸದ್ಯ, ಘಟನೆ ಸಂಬಂಧ, ವೈಟ್‌ಫೀಲ್ಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Related Articles

Back to top button
error: Content is protected !!