ರಾಜಕೀಯ

15 ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಮೊದಲ ಪಟ್ಟಿ ಫೈನಲ್.‌.? ಯಾವ ಕ್ಷೇತ್ರಕ್ಕೆ ಯಾರು..?

Views: 130

ಬೆಂಗಳೂರು: ಕಾಂಗ್ರೆಸ್‌ ಚುನಾವಣಾ ಸಮಿತಿ ಸಭೆಯಲ್ಲಿ ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಸಂಭವನೀಯರ ಪಟ್ಟಿಯನ್ನು ದೆಹಲಿ ವರಿಷ್ಠರಿಗೆ ಕಳುಹಿಸಲು ಸೋಮವಾರ ಚರ್ಚೆ ನಡೆಸಿದ್ದು, ಸುಮಾರು 15 ಕ್ಷೇತ್ರಗಳ ಹೆಸರನ್ನು ಅಂತಿಮಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇತ್ತ ರಾಜ್ಯದಲ್ಲಿ ಆಡಳಿತರೂಢ ಕಾಂಗ್ರೆಸ್‌ ಗೆ ಸೋಲಿನ ರುಚಿ ತೋರಿಸಲು ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಯಾಗಿದ್ದು, 28 ಕ್ಷೇತ್ರಗಳನ್ನು ಗೆಲ್ಲುವ ಗುರಿಯೊಂದಿಗೆ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ನಾಯಕರು ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಇತ್ತ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರ ತಂತ್ರಕ್ಕೆ ಪ್ರತಿಯಾಗಿ, ಕಾಂಗ್ರೆಸ್‌ ನಾಯಕರು ಅಳೆದು ತೂಗಿ ಅಭ್ಯರ್ಥಿಗಳನ್ನು ಫೈನಲ್‌ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಮೊದಲ 15 ಮಂದಿಯ ಪಟ್ಟಿಯಲ್ಲಿ ಹಾಲಿ ಸಚಿವರ ಪೈಕಿ ಒಬ್ಬರ ಹೆಸರು ಮಾತ್ರ ಇದೆ. ಅದು ಕೋಲಾರ ಕ್ಷೇತ್ರಕ್ಕೆ ಕೆ.ಎಚ್‌. ಮುನಿಯಪ್ಪ. ಇನ್ನು ಹಾಲಿ ಶಾಸಕರ ಪೈಕಿ ಬೆಂಗಳೂರು ಕೇಂದ್ರಕ್ಕೆ ಎನ್‌.ಎ. ಹ್ಯಾರೀಸ್‌ ಅವರ ಹೆಸರು ಇದೆ. ಅಲ್ಲದೇ ಪ್ರತಿಯೊಂದು ಕ್ಷೇತ್ರದ ಟಿಕೆಟ್‌ ಗಾಗಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದು, ಅಂತಿಮ ನಿರ್ಧಾರವನ್ನು ಹೈಕಮಾಂಡ್‌ಗೆ ಬಿಡಲು ನಿರ್ಧರಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ರಾಜ್ಯ ಕಾಂಗ್ರೆಸ್‌ ಅಭ್ಯರ್ಥಿಗಳ ಅಂತಿಮ ಪಟ್ಟಿ?

ಬೆಂಗಳೂರು ಗ್ರಾಮಾಂತರ – ಡಿ.ಕೆ. ಸುರೇಶ್‌

ಮಂಡ್ಯ- ಸ್ಟಾರ್ ಚಂದ್ರು (ವೆಂಕಟೇರಮಣಗೌಡ)

ತುಮಕೂರು- ಎಸ್‌.ಪಿ. ಮುದ್ದಹನುಮೇಗೌಡ

ಮೈಸೂರು- ಎಂ. ಲಕ್ಷ್ಮಣ್

ಚಿಕ್ಕಬಳ್ಳಾಪುರ- ರಕ್ಷಾ ರಾಮಯ್ಯ

ಕೋಲಾರ- ಕೆ.ಎಚ್‌. ಮುನಿಯಪ್ಪ

ಬೆಂಗಳೂರು ಕೇಂದ್ರ-ಎನ್‌.ಎ. ಹ್ಯಾರೀಸ್‌

ಬೆಂಗಳೂರು ದಕ್ಷಿಣ- ಸೌಮ್ಯಾ ರೆಡ್ಡಿ

ಹಾಸನ- ಶ್ರೇಯಸ್‌ ಪಟೇಲ್

ಶಿವಮೊಗ್ಗ – ಗೀತಾ ಶಿವರಾಜಕುಮಾರ್

ಚಿತ್ರದುರ್ಗ- ಬಿ.ಎನ್. ಚಂದ್ರಪ್ಪ

ವಿಜಯಪುರ- ಮಾಜಿ ಶಾಸಕ ರಾಜು ಅಲಗೂರು

ಬೀದರ್‌- ರಾಜಶೇಖರ್ ಪಾಟೀಲ್

ಕಲಬುರಗಿ- ರಾಧಾಕೃಷ್ಣ

ಉಡುಪಿ-ಚಿಕ್ಕಮಗಳೂರು- ಜಯಪ್ರಕಾಶ್‌ ಹೆಗ್ಡೆ ,ಡಾ. ಅಂಶುಮಂತ್

Related Articles

Back to top button