ಜನಮನ

15 ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ:ಶಾಲೆಗೆ ಓಡೋಡಿ ಬಂದ ಪೋಷಕರು!

Views: 8

ಬೆಂಗಳೂರು, ಬೆಂಗಳೂರಿನ 15 ಖಾಸಗಿ ಶಾಲೆಗಳಿಗೆ ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು, ಪೊಲೀಸರು ಶಾಲೆಗಳಿಗೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಇ-ಮೇಲ್ ಬೆದರಿಕೆ ಪ್ರತಿ ಟಿ9ಗೆ ಲಭ್ಯವಾಗಿದ್ದು, ಮುಜಾಹಿದ್ದಿನ್ ಹೆಸರಲ್ಲಿ ಬಾಂಬ್ ಬೆದರಿಕೆ ಮೇಲ್ ಬಂದಿದೆ. ‘ಎಲ್ಲರೂ ಇಸ್ಲಾಂಗೆ ಮತಾಂತರಗೊಳ್ಳಲು ತಯಾರಿಗಿರಿ. ಇಲ್ಲ ಎಲ್ಲರೂ ಸಾಯಲು ಸಿದ್ಧರಾಗಿರಿ. ನಿಮ್ಮನ್ನು ಹಾಗೂ ನಿಮ್ಮ ಮಕ್ಕಳನ್ನು ಸಾಯಿಸುತ್ತೇವೆ. ನೀವೆಲ್ಲರೂ ಸಾಯಲು ಸಿದ್ಧರಾಗಿರಿ ’ಎಂದು ಇಮೇಲ್​ನಲ್ಲಿ ಬರೆಯಲಾಗಿದೆ.

ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಹಿಂದೂ-ಮುಸ್ಲಿಂ ಗಲಾಟೆಗಳ ಮಧ್ಯೆ ಈ ರೀತಿ ಬೆದರಿ ಹಾಕಿರುವುದು ಬೆಂಕಿಗೆ ತುಪ್ಪ ಸುರಿದಂತಾಗಿದೆ. ಈ ಹಿಂದೆ ಅನೇಕ ಬಾರಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿವೆ. ಆದ್ರೆ, ಬಾರಿ ಉಗ್ರವಾದ ಪದಗಳೊಂದಿಗೆ ಬೆದರಿಕೆ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ. ಅಲ್ಲದೇ ಇದನ್ನು ಪೊಲಿಸರು ಗಂಭೀರವಾಗಿ ಪರಿಗಣಿಸಿದ್ದು, ಬಸವೇಶ್ವರ ನಗರದ ಶಾಲೆಯ ಮೂಲೆ ಮೂಲೆಯಲ್ಲಿ ತಪಾಸಣೆ ಮಾಡುತ್ತಿದ್ದಾರೆ.

ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ಇನ್ನು ಶಾಲೆಗಳಿಗೆ ಬಾಂಬ್ ಬೆದರಿಕೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಯಾರೇ ತಪ್ಪು ಮಾಡಿದ್ದರೂ ಕಠಿಣ ಕ್ರಮಕೈಗೊಳ್ಳುತ್ತೇವೆ. ಪೋಷಕರು, ಮಕ್ಕಳು ಯಾರೂ ಆತಂಕ ಪಡುವ ಅಗತ್ಯವಿಲ್ಲ​​​. ಇ-ಮೇಲ್ ಬೆದರಿಕೆ ಪ್ರಕರಣವನ್ನು ಲಘುವಾಗಿ ಪರಿಗಣಿಸುವುದಿಲ್ಲ. ಇಂತಹ ಬೆದರಿಕೆ ಹಾಕುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದೇನೆ. ಇಂತಹ ಘಟನೆಗಳು ಮತ್ತೆ ನಡೆಯದಂತೆ ಕಠಿಣ ಕ್ರಮಕೈಗೊಳ್ಳುತ್ತೇವೆ ಎಂದು ಖಡಕ್ ಆಗಿ ಹೇಳಿದರು.

ಶಾಲೆಗೆ ಅಶೋಕ್​, ಸುರೇಶ್ ಕುಮಾರ್ ಭೇಟಿ

ಬಾಂಬ್ ಬೆದರಿಕೆ ಬಂದಿರುವ ಬಸವೇಶ್ವರನಗರದಲ್ಲಿರುವ ನ್ಯಾಫಲ್ ಶಾಲೆಗೆ ವಿರೋಧ ಪಕ್ಷದ ನಾಯಕ ಆರ್​.ಅಶೋಕ್ ಹಾಗೂ ಶಾಸಕ ಸುರೇಶ್ ಕುಮಾರ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಬಳಿಕ ಮಾತನಾಡಿರು ಸುರೇಶ್ ಕುಮಾರ್, ಬಸವೇಶ್ವರ ನಗರದ ನ್ಯಾಫಲ್ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದೇನೆ. ಕಳೆದ ಬಾರಿಯೂ ವಿದ್ಯಾರ್ಥಿಯೊಬ್ಬ ಬೆದರಿಕೆ ಮೇಲ್ ಕಳಿಸಿದ್ದ. ಈಗ ಬಂದಿರುವ ಮೇಲ್​ನಲ್ಲಿ​​​​​​ ಉಗ್ರವಾದ ಪದಗಳನ್ನು ಬಳಸಿದ್ದಾರೆ. ಖರಿಜಿಟೆಸ್​​.ಬೀಬಲ್​​​​​​.ಕಾಮ್​​​ ಎಂಬ ಹೆಸರಿನ ಮೇಲ್​ನಿಂದ ಸಂದೇಶ ಬಂದಿದ್ದು, ಪೊಲೀಸರು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ​ ಎಂದು ಮಾಹಿತಿ ನೀಡಿದರು.

 

Related Articles

Back to top button
error: Content is protected !!