ಜನಮನ

1600 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Views: 12

ಕನ್ನಡ ಕರಾವಳಿ ಸುದ್ದಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೀಗ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್/ಡಿಎಆರ್) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಜಿಲ್ಲಾ, ನಗರ ಮತ್ತು ಘಟಕಗಳಲ್ಲಿ ಖಾಲಿ ಇರುವ 1600 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ: ಒಟ್ಟು ಹುದ್ದೆಗಳು – 1600

ಸಾಮಾನ್ಯ ಹುದ್ದೆಗಳು – 1421

ಕಲ್ಯಾಣ ಕರ್ನಾಟಕ ಮೀಸಲು ಹುದ್ದೆ – 179

ಈ ಹುದ್ದೆಗಳಿಗೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಹಾಗೂ ಸೇವಾನಿರತ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ವಿದ್ಯಾರ್ಹತೆ: ಅಭ್ಯರ್ಥಿಗಳು ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ: ಕನಿಷ್ಠ 18 ವರ್ಷಗಳಾಗಿದ್ದು, ಸಾಮಾನ್ಯ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 33 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 35ವರ್ಷ. ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ ವಯೋಮಿತಿ ನಿಗದಿಸಲಾಗಿದೆ.

ವೇತನ: 37,500 ರೂ.ನಿಂದ 76,100 ರೂ. ಮಾಸಿಕ

ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕಿದೆ. ಸಾಮಾನ್ಯ ಮತ್ತು ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 750 ರೂ. ಶುಲ್ಕ ಪಾವತಿಸಬೇಕು. ಇತರೆ ಅಭ್ಯರ್ಥಿಗಳು 500 ರೂ. ಶುಲ್ಕ ಪಾವತಿಸಬೇಕಿದೆ.

ಹುದ್ದೆ ಆಯ್ಕೆ: ಈ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಒಎಂಆರ್ ಮಾದರಿಯಲ್ಲಿ ನಡೆಸಲಾಗುವುದು. ತಪ್ಪು ಉತ್ತರಕ್ಕೆ ನಾಲ್ಕನೇ ಒಂದಂಶ ಋಣಾತ್ಮಕ ಮೌಲ್ಯಮಾಪನವಿರಲಿದೆ. ಜೊತೆಗೆ ಅಭ್ಯರ್ಥಿಗಳು ದೇಹದಾರ್ಢ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆಗೆ ಒಳಗಾಗಬೇಕು. ದೇಹದಾರ್ಢ್ಯತೆಗೆ ಎದುರಾಗುವ ಅಭ್ಯರ್ಥಿಗಳು ಹೊಂದಿರಬೇಕಾದ ಅರ್ಹತೆ ಕುರಿತು ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿರುವ ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಈ ಹುದ್ದೆಗಳಿಗೆ ಜೂನ್ 22ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜುಲೈ 22 ಆಗಿದೆ. ಸೆಪ್ಟಂಬರ್ 6ರಂದು ಪರೀಕ್ಷೆ ನಡೆಯುವ ಸಾಧ್ಯತೆ ಇದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಈ ಹುದ್ದೆಗಳ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಕೆಗೆ ಅಭ್ಯರ್ಥಿಗಳು ಇಲಾಖಾ ಜಾಲತಾಣ ksp-recruitment.in ಮತ್ತು ಕೆಇಎ ಜಾಲತಾಣಗಳಾದ cetonline.karnataka.gov.in ಭೇಟಿ ನೀಡಿ.

Related Articles

Back to top button
error: Content is protected !!