ರಾಜಕೀಯ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಪೋಕ್ಸೊ ಪ್ರಕರಣ ದಾಖಲು

Views: 99

ಕರ್ನಾಟಕದ ಮಾಜಿ ಮುಖ್ಯಮಂತ್ರಿ,   ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ‘ಪೋಕ್ಸೊ’ ಪ್ರಕರಣ ದಾಖಲಾಗಿದೆ

ಬೆಂಗಳೂರಿನ ಸದಾಶಿವನಗರ ಪೊಲೀಸ ಠಾಣೆಯಲ್ಲಿ ಗುರುವಾರ ತಡರಾತ್ರಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ತಾಯಿ ನೀಡಿದ ದೂರಿನ ಮೇರೆಗೆ ದೂರು ನೀಡಿದ್ದರು. ಈ ದೂರಿನ ಆಧಾರದಲ್ಲಿ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (81) ಅವರ ವಿರುದ್ಧ 2012 ರ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಸೆಕ್ಷನ್ ಅಡಿಯಲ್ಲಿ ಕೇಸು ದಾಖಲಾಗಿದೆ.

ಪೊಲೀಸರು ‘ಪೋಕ್ಸೊ’ ಕಾಯ್ದೆಯ ಸೆಕ್ಷನ್ 8 ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಎ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ ಎಂದು ಪೊಲೀಸ್ ಮೂಲಗಳು ದೃಢಪಡಿಸಿವೆ ಎಂದು ವರದಿ ಆಗಿದೆ.

ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯ ಜೊತೆಗಿದ್ದ ತಾಯಿ ಗುರುವಾರ ಸಂಜೆ ಪೊಲೀಸರಿಗೆ ದೂರು ಕೊಟ್ಟಿದ್ದಾರೆ. ಮಧ್ಯರಾತ್ರಿ ಪ್ರಕರಣ ದಾಖಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಖಚಿತವಾಗಿದೆ.

ದೌರ್ಜನ್ಯ ಪ್ರಕರಣವು ಕಳೆದ ತಿಂಗಳ ಫೆಬ್ರವರಿ 02 ರಂದು ನಡೆದಿದೆ ಎನ್ನಲಾಗಿದೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಯ ಸಹಾಯವನ್ನು ಪಡೆಯಲು ಸಂತ್ರಸ್ತ ಮಗಳ ಜೊತೆ ತಾಯಿ ತೆರಳಿದ್ದ ವೇಳೆ ಲೈಂಗಿಕ ದೌರ್ಜನ್ಯದ ಘಟನೆ ಸಂಭವಿಸಿದೆ ಎಂದು ವರದಿ ಆಗಿದೆ.

ಯಡಿಯೂರಪ್ಪ ಅವರ ವಿರುದ್ಧ ಪ್ರಕರಣ ದಾಖಲಿಸಿರುವ ಶಿವಮೊಗ್ಗ ಜಿಲ್ಲೆ ಮೂಲಕ ಈ ಮಹಿಳೆಯ ಅನೇಕ ಅಧಿಕಾರಿಗಳು, ರಾಜಕೀಯ ನಾಯಕರ ವಿರುದ್ಧವು ಸೇರಿ ಸುಮಾರು 53 ಪ್ರಕರಣ ದಾಖಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿಂದೆ ಕೆಲವು ಬಾರಿ ತಮ್ಮ ಸಮಸ್ಯೆಗಳನ್ನು ಯಡಿಯೂರಪ್ಪ ಬಳಿ ಹೇಳಿಕೊಂಡಿದ್ದರು ಎನ್ನಲಾಗಿದೆ.

ಲೋಕಸಭಾ ಚುನಾವಣೆ ಹೊತ್ತಿನಲ್ಲಿ ರಾಜ್ಯದ ಹಿರಿಯ ನಾಯಕರ ವಿರುದ್ಧ ಇಂಥದ್ದೊಂದು ಪ್ರಕರಣ ದಾಖಲಾಗಿದ್ದನ್ನು ನಂಬಬೇಕೋ, ಬೇಡವೋ ಎಂದು ಜನರು ಗೊಂದಲ್ಲಿದ್ದಾರೆ. ಇದು ನಿಜವೇ? ಚುನಾವಣೆಯ ದುರುದ್ದೇಶಕ್ಕೆ ಯಡಿಯೂರಪ್ಪ ಒಳಗಾದರೆ ಎಂದು ಕೆಲವು ಮಾತನಾಡಿಕೊಳ್ಳುತ್ತಿದ್ದಾರೆ.

 

Related Articles

Back to top button