ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ವ್ಯವಸ್ಥಾಪಕಿ ಕರ್ತವ್ಯದಲ್ಲಿರುವಾಗ ಮನೆಗೆ ತೆರಳಿ ನೇಣುಬಿಗಿದು ಕೊಂಡು ಆತ್ಮಹತ್ಯೆ

Views: 1483
ಸಿದ್ದಾಪುರ: ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆಶಾ ಎಸ್. (52) ಅವರು ಮಾ.20ರ ಬುಧವಾರ ಅಪರಾಹ್ನ ಸೊಸೈಟಿಯಿಂದ ನೇರವಾಗಿ ತೆರಳಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಆಶಾ ಸುಮಾರು 28 ವರ್ಷಗಳಿಂದ ಕಾಲ ಸೊಸೈಟಿಯಲ್ಲಿ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಘಟನೆ ವಿವರ,
ಪ್ರಭಾರ ವ್ಯವಸ್ಥಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬುಧವಾರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದರು. ಸಂಘದಲ್ಲಿ ಲೆಕ್ಕ ಪರಿಶೋಧನೆ ನಡೆಯುತ್ತಿತ್ತು. ಸುಮಾರು ಮಧ್ಯಾಹ್ನ 12 ಗಂಟೆಯ ಸಮಯದಲ್ಲಿ ಕಚೇರಿಯಿಂದ ಯಾರಿಗೂ ತಿಳಿಸದೆ ನೇರವಾಗಿ ಮನೆಗೆ ಹೋಗಿ, ಮಹಡಿಯ ಕೋಣೆಯಲ್ಲಿ ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆಶಾ ಅವರು ತಮ್ಮ ಚಿನ್ನವನ್ನು ಪತಿಯ ಹೆಸರಿನಲ್ಲಿ ಸಂಘದಲ್ಲಿ ಅಡವಿಟ್ಟು ಸಾಲ ಪಡೆದಿದ್ದರು. ಚಿನ್ನವನ್ನು ಲಾಕರ್‌ನಲ್ಲಿ ಇಡುವ ಜವಾಬ್ದಾರಿಯನ್ನು ಅವರೇ ನೋಡಿಕೊಳ್ಳುತ್ತಿದ್ದರು. ಬುಧವಾರ ಲೆಕ್ಕ ಪರಿಶೋಧನೆ ನಡೆಯುತ್ತಿರುವಾಗ ಅವರು ಅಡವಿಟ್ಟ ಚಿನ್ನ ಲಾಕರ್‌ನಲ್ಲಿ ಇಲ್ಲದಿರುವುದನ್ನು ಆಶಾ ಅವರಲ್ಲಿ ವಿಚಾರಣೆ ನಡೆಸಲಾಗಿದೆ. ಚಿನ್ನ ಇಲ್ಲದಿರುವ ವಿಚಾರ ಅವಮಾನವಾಗುತ್ತದೆ ಎಂದು ಹೆದರಿ, ಕಚೇರಿಯಲ್ಲಿ ಯಾರಿಗೂ ಹೇಳದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ತಿಳಿದು ಬಂದಿದೆ.
ಆಶಾ ಅವರು ಕಚೇರಿ ಸಮಯದಲ್ಲಿ ಇಲ್ಲದಿರುವುದು ಗೊತ್ತಾದ ಬಳಿಕ ಸಿಬ್ಬಂದಿಗಳು ಹುಡುಕಾಟ ಹುಡುಕಾಟ ನಡೆಸಿದರು. ನಂತರ ಸಿಸಿ ಕೆಮರಾ ನೋಡಿದಾಗ, ಮನೆಯ ಕಡೆಗೆ ಸ್ಕೂಟಿ ಹತ್ತಿಕೊಂಡು ಹೋಗುತ್ತಿರುವುದು ತಿಳಿಯಲಾಗಿದೆ. ಕೂಡಲೇ ಕಾರ್ಯ ಪ್ರವರ್ತರಾದ ಮಹೇಶ್ ಹಾಗೂ ಸಿಬಂದಿ ಮಂಜುನಾಥ ಅವರು ಆಶಾ ಅವರ ಮನೆಗೆ ಹೋದಾಗ ಆಶಾ ಅವರ ತಾಯಿ ಬೊಬ್ಬೆ ಹಾಕಿದಾಗ ಸ್ಥಳೀಯರು ಬಂದು ಬಾಗಿಲು ಒಡೆದು ಆಶಾ ಅವರು ನೇಣುಬಿಗಿದ ಸ್ಥಿತಿಯಲ್ಲಿ ಇದ್ದರು. ಕೂಡಲೇ ನೇಣಿನಿಂದ ಆಶಾ ಅವರನ್ನು ಕೆಳಗೆ ಇಳಿಸಿ, ಸಿದ್ದಾಪುರ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿಂದ ಮಣಿಪಾಲದ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದರು ಎಂದು ತಿಳಿದು ಬಂದಿದೆ.
ಆಶಾ ಅವರಿಗೆ ಪುತ್ರ ಮದುವೆಯಾಗಿ ವಿದೇಶದಲ್ಲಿ ಇದ್ದಾರೆ. ಪುತ್ರಿ ಉನ್ನತ ವ್ಯಾಸಂಗ ಮಾಡುತ್ತಿದ್ದರು. ಆತ್ಮಹತ್ಯೆಯ ಮುಂಚೆ ಮಗಳಿಗೆ ‘ಸಾರಿ ಮಗಳೇ, ಎಂದು ಮೆಸೇಜ್ ಮಾಡಿದ್ದರು. ತಾಯಿ ಹತ್ತಿರ ನೀನು ಊಟ ಮಾಡು ನನಗೆ ಸೊಸೈಟಿಯ ಕೆಲಸದಲ್ಲಿ ಬ್ಯೂಸಿಯಾಗಿದ್ದೇನೆ ನಾನು ಮಹಡಿಯ ಮೇಲೆ ಇರುತ್ತೇನೆ ನನ್ನನ್ನು ಕರೆಯಬೇಡ ಎಂದು ಹೇಳಿದ್ದರು.