ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಕೆ ವೇಳೆ ಭಾಗವಹಿಸುವಂತೆ ವಿದ್ಯಾರ್ಥಿಗಳಿಗೆ ಒತ್ತಾಯ: ಆರೋಪ

Views: 50
ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ರ್‍ಯಾಲಿಯಲ್ಲಿ ಭಾಗವಹಿಸುವಂತೆ ವಿದ್ಯಾರ್ಥಿಗಳಿಗೆ ಒತ್ತಾಯಿಸಿರುವ ಆರೋಪ ಕೇಳಿ ಬಂದಿದೆ.
ವಿವಿ ಪುರಂ ಬೆಂಗಳೂರಿನ ಜೈನ್ ಕಾಲೇಜಿನ ವಿದ್ಯಾರ್ಥಿಗಳಿಗೆ ತೇಜಸ್ವಿ ಸೂರ್ಯ ಅವರ ನಾಮಪತ್ರ ಸಲ್ಲಿಕೆ ರ್‍ಯಾಲಿಗೆ ಹಾಜರಾಗುವಂತೆ ಒತ್ತಾಯಿಸಲಾಗುತ್ತಿದೆ ಮತ್ತು ಇಲ್ಲದಿದ್ದರೆ ಅವರಿಗೆ ಹಾಜರಾತಿ ನೀಡುವುದಿಲ್ಲ ಎಂದು ಹೇಳಾಗಿದೆ. ನಾಮಪತ್ರ ಸಲ್ಲಿಕೆ ರ್‍ಯಾಲಿಯಲ್ಲಿ ಅವರ ಹೆಸರು ಮುದ್ರಿತ ಟೀ ಶರ್ಟ್‌ಗಳನ್ನು ಧರಿಸಲು ಮತ್ತು ತೇಜಸ್ವಿ ಸೂರ್ಯ ಪರ ಘೋಷಣೆಗಳನ್ನು ಕೂಗುವಂತೆ ಸೂಚಿಸಲಾಗಿದೆ. ಇದು ಸರ್ವಾಧಿಕಾರವಲ್ಲವೇ? ಇದು ಸರಿಯೇ? ಚುನಾವಣಾ ಆಯೋಗ ಏನು ನಿದ್ರೆಗೆ ಜಾರಿದೆಯಾ ಎಂದು ಪ್ರಶ್ನಿಸಿದ್ದಾರೆ.
ಗುರುರಾಜ್ ಅಂಜನ್ ಎಂಬವರು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಅಪ್ರಬುದ್ಧ ರಾಜಕಾರಣಿ ತೇಜಸ್ವಿ ಸೂರ್ಯ ಕಾಲೇಜು ವಿದ್ಯಾರ್ಥಿಗಳನ್ನೂ ಬಿಡಲಿಲ್ಲ. ಜೈನ್ ಕಾಲೇಜಿನ ವಿದ್ಯಾರ್ಥಿಗಳು ತೇಜಸ್ವಿ ಸೂರ್ಯ ಅವರ ನಾಮನಿರ್ದೇಶನ ರ್‍ಯಾಲಿಗೆ ಹಾಜರಾಗುವಂತೆ ಒತ್ತಾಯಿಸಲಾಗುತ್ತಿದೆ ಮತ್ತು ಇಲ್ಲದಿದ್ದರೆ ಅವರಿಗೆ ಹಾಜರಾತಿ ನೀಡುವುದಿಲ್ಲ ಎಂದು ಹೇಳಲಾಗಿದೆ. ಇದಕ್ಕಾಗಿಯೇ ನಾವು ಬೆಂಗಳೂರು-ದಕ್ಷಿಣ ಜನರನ್ನು ತೇಜಸ್ವಿ ಸೂರ್ಯ ಪ್ರತಿನಿಧಿಸುವುದನ್ನು ಬಯಸುವುದಿಲ್ಲ ಎಂದು ಹೇಳಿದ್ದಾರೆ.






