ರಾಜಕೀಯ

2-3 ತಿಂಗಳೊಳಗೆ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲು ಸರ್ಕಾರ ಸಜ್ಜು!

Views: 125

ಕನ್ನಡ ಕರಾವಳಿ ಸುದ್ದಿ: ಮುಂದಿನ ಎರಡು-ಮೂರು ತಿಂಗಳೊಳಗೆ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲು ಸರ್ಕಾರ ಸಜ್ಜಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಚರ್ಚಿಸಲಾಗಿದ್ದು, ನ್ಯಾಯಾಲಯದಲ್ಲಿರುವ ಮೀಸಲಾತಿ ಗೊಂದಲಗಳನ್ನು ಬಗೆಹರಿಸಿ ಶೀಘ್ರವೇ ಚುನಾವಣೆ ನಡೆಸಲು ಸಿದ್ಧತೆ ನಡೆಸುವಂತೆ ಸೂಚನೆ ನೀಡಲಾಗಿದೆ ಎಂದರು.

ಇನ್ನು ಮನೇಗಾ ಹೆಸರು ಬದಲಾವಣೆಯ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿದ ಅವರು, 2026ರ ಜನವರಿ 5 ರಿಂದ ಪಂಚಾಯತ್ ಮಟ್ಟದಿಂದ ಬೃಹತ್ ಹೋರಾಟ ಹಮ್ಮಿಕೊಳ್ಳುವುದಾಗಿ ಘೋಷಿಸಿದರು. ಗ್ಯಾರಂಟಿ ಸಮಿತಿ ಹಾಗೂ ವಿವಿಧ ಇಲಾಖೆಗಳ ನಾಮನಿರ್ದೇಶಿತ ಸದಸ್ಯರು ಈ ಹೋರಾಟದ ಜವಾಬ್ದಾರಿ ಹೊರಬೇಕು ಎಂದು ಅವರು ಸೂಚಿಸಿದರು.

Related Articles

Back to top button
error: Content is protected !!