ಇತರೆ

200 ಅಡಿ ಆಳದ ಕಂದಕಕ್ಕೆ ಬಿದ್ದ ಬಸ್, ಪುಟ್ಟ ಮಗು ಸೇರಿದಂತೆ ಏಳು ಮಂದಿಯ ದಾರುಣ ಸಾವು!

Views: 0

ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ಸೊಂದು ಕಂದಕಕ್ಕೆ ಉರುಳಿದ ಪರಿಣಾಮ ಮಗು ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಹರಿಯಾಣದಲ್ಲಿ ನಡೆದಿದೆ.

ಹರಿಯಾಣದಿಂದ ಬರುತ್ತಿದ್ದ ಬಸ್ ನೈನಿತಾಲ್ ಜಿಲ್ಲೆಯಲ್ಲಿ ಕಂದಕಕ್ಕೆ ಉರುಳಿದ್ದು, ಪರಿಣಾಮ ಬಸ್‌ನಲ್ಲಿದ್ದ ಐವರು ಮಹಿಳೆಯರು, ಒಬ್ಬ ಪುರುಷ ಮತ್ತು ಒಂದು ಮಗು ಸೇರಿದಂತೆ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಇದುವರೆಗೆ 26 ಜನರನ್ನು ರಕ್ಷಿಸಲಾಗಿದ್ದು, ಹೆಚ್ಚಿನ ಕಾರ್ಯಾಚರಣೆ ನಡೆಯುತ್ತಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಬಸ್‌ ಕಂದಕಕ್ಕೆ ಬಿದ್ದ ಪರಿಣಾಮ ಮೃತಪಟ್ಟ ದುರ್ದೈವಿಗಳ ಮೃತದೇಹಗಳನ್ನು ಸಿವಿಲ್ ಪೊಲೀಸರಿಗೆ ಹಸ್ತಾಂತರಿಸಲಾಗಿದ್ದು, ಪೊಲೀಸರು ಪೋಸ್ಟ್‌ ಮಾರ್ಟಂ ನಡೆಸಲು ಆಸ್ಪತ್ರೆಗೆ ರವಾನಿಸಿದ್ದಾರೆ.

ಅಧಿಕಾರಿಗಳು ಹೇಳುವ ಪ್ರಕಾರ, ನೈನಿತಾಲ್‌ನ ವಿಪತ್ತು ನಿಯಂತ್ರಣಾ ಕೊಠಡಿ ಭಾನುವಾರ 30 ರಿಂದ 33 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಕಾಲಾಧುಂಗಿ ರಸ್ತೆಯ ನಲ್ನಿಯಲ್ಲಿ ಕಂದಕಕ್ಕೆ ಉರುಳಿದೆ.

ಈ ಬಗ್ಗೆ ಸ್ಥಳೀಯರು ಎಸ್‌ಡಿಆರ್‌ಎಫ್‌ಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿಯ ಮೇರೆಗೆ ಕಮಾಂಡೆಂಟ್ ಎಸ್‌ಡಿಆರ್‌ಎಫ್ ಮಣಿಕಾಂತ್ ಮಿಶ್ರಾ ಅವರ ಸೂಚನೆಯಂತೆ ಪೋಸ್ಟ್ ರುದ್ರಪುರ, ನೈನಿತಾಲ್ ಮತ್ತು ಖೈರ್ನಾದಿಂದ ಎಸ್‌ಡಿಆರ್‌ಎಫ್ ರಕ್ಷಣಾ ತಂಡಗಳು ರಕ್ಷಣೆಗಾಗಿ ಸ್ಥಳಕ್ಕೆ ತೆರಳಿದೆ.

ಬಸ್ ನಿಯಂತ್ರಣ ತಪ್ಪಿ ಸುಮಾರು 200 ಮೀಟರ್ ಆಳದ ಕಂದಕಕ್ಕೆ ಉರುಳಿದ ಪರಿಣಾಮ ಸ್ಥಳಕ್ಕೆ ಆಗಮಿಸಿದ ರಕ್ಷಣಾ ಸಿಬ್ಬಂದಿ ಬಸ್‌ನಲ್ಲಿದ್ದವರನ್ನು ಮೇಲಕ್ಕೆ ಎತ್ತುವ ಪ್ರಯತ್ನವನ್ನು ಮಾಡಿದ್ದಾರೆ.

ನಂತರ ಸ್ಥಳೀಯ ಪೊಲೀಸರು ಮತ್ತು ಇತರ ರಕ್ಷಣಾ ಘಟಕಗಳೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಬಸ್ಸಿನಲ್ಲಿದ್ದ 26 ಮಂದಿ ಗಾಯಾಳುಗಳನ್ನು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

Related Articles

Back to top button