ಶಿಕ್ಷಣ

2024ನೇ ಸಾಲಿನ ಸಿಇಟಿ ಫಲಿತಾಂಶ ಪ್ರಕಟ: ಫಲಿತಾಂಶ ನೋಡುವುದು ಹೇಗೆ ?

Views: 101

ಬೆಂಗಳೂರು: 2024ನೇ ಸಾಲಿನ ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ವೆಟರಿನರಿ, ಬಿ-ಫಾರ್ಮ್‌, ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ನಡೆಸಿದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಿಇಟಿ ಪರೀಕ್ಷೆಯನ್ನು ಏಪ್ರಿಲ್ 18, 19 ಹಾಗೂ 20ರಂದು ನಡೆಸಿತ್ತು. ಇದರಲ್ಲಿ ಸುಮಾರು 3.28 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ನೊಂದಾಯಿಸಿ ಕೊಂಡಿದ್ದರು. ಜೂನ್‌ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎನ್ನಲಾಗಿತ್ತು.

ಸಿಇಟಿ ಫಲಿತಾಂಶವನ್ನು ಲೋಕಸಭಾ ಚುನಾವಣೆಯ ರಿಸಲ್ಟ್‌ ಬಳಿಕವೇ ಘೋಷಣೆಯಾಗಲಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ, ದ್ವಿತೀಯ ಪಿಯುಸಿ 2ರ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶವನ್ನು ಪ್ರಕಟ ಮಾಡಲಾಗುವುದು ಎಂದು ಹೇಳಿದ್ದರು. ಕಳೆದ ಮೇ 21ರಂದು ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶವು ಪ್ರಕಟಗೊಂಡಿತ್ತು.

ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ಮೂರು ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಮೊದಲ ಎರಡು ಪರೀಕ್ಷೆಗಳ ಪೈಕಿ ಯಾವುದರಲ್ಲಿ ಹೆಚ್ಚು ಅಂಕ ಬಂದಿದೆಯೊ ಅವುಗಳನ್ನೇ ಸಿಇಟಿ ರ‍್ಯಾಂಕ್‌ಗೆ ಪರಿಗಣನೆ ಮಾಡಲಾಗುತ್ತದೆ.

ಫಲಿತಾಂಶ ಚೆಕ್‌ ಮಾಡುವ ವಿಧಾನ ಹೇಗೆ?

ರಿಸಲ್ಟ್‌ ಪ್ರಕಟವಾದ ಬಳಿಕ ಚೆಕ್‌ ಮಾಡುವ ವಿಧಾನದ ಹಂತ ಹಂತದ ಮಾಹಿತಿ ಇಲ್ಲಿದೆ. ಕರ್ನಾಟಕ ಎಕ್ಸಾಮಿನೇಷನ್‌ ಅಥಾರಿಟಿ ಅಫೀಶಿಯಲ್ ವೆಬ್‌ಸೈಟ್‌ https://cetonline.karnataka.gov.in/kea/ ಭೇಟಿ ನೀಡಿ.

ಓಪನ್‌ ಆದ ಪುಟದ ಮೇಲ್ಭಾಗದಲ್ಲಿರುವ ʼಪ್ರವೇಶʼ ಆಯ್ಕೆಯನ್ನು ಕ್ಲಿಕ್‌ ಮಾಡಿ ಬಳಿಕ ʼಯುಜಿಸಿಇಟಿ 2024′ ಆಪ್ಶನ್‌ ಸೆಲೆಕ್ಟ್‌ ಮಾಡಿ.

ಇತ್ತೀಚಿನ ಪ್ರಕಟಣೆಗಳು ಎಂದಿರುವ ಕೆಳಗಡೆ ‘ಯುಜಿಸಿಇಟಿ 2024’ ಫಲಿತಾಂಶದ ಲಿಂಕ್ ನೀಡಲಾಗಿರುತ್ತದೆ. ಅದನ್ನು ಕ್ಲಿಕ್ ಮಾಡಿ.

ಈಗ ತೆರೆದುಕೊಳ್ಳುವ ಹೊಸ ಪುಟದಲ್ಲಿ ಅಭ್ಯರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ಮಾಹಿತಿ ನೀಡಿ, ‘Submit’ ಬಟನ್‌ ಕ್ಲಿಕ್‌ ಮಾಡಿದರೆ ಫಲಿತಾಂಶ ಕಾಣಿಸುತ್ತದೆ. ಇದರ ಹೊರತಾಗಿಯೂ ವಿದ್ಯಾರ್ಥಿಗಳ ಫೋನ್‌ ನಂಬರ್‌ಗೆ ಫಲಿತಾಂಶದ ಮಸೇಜ್‌ ಬರಲಿದೆ

Related Articles

Back to top button