ಕೃಷಿ

2024 -25 ನೇ ಸಾಲಿಗೆ ವಾರಾಹಿ ನೀರಾವರಿ ಯೋಜನೆ ಪೂರ್ಣ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

Views: 2

 

 

ವಾರಾಹಿ ನೀರಾವರಿ ಯೋಜನೆ ಅಡಿಯಲ್ಲಿ ಬರುವ ಎಲ್ಲಾ ಕಾಮಗಾರಿಗಳನ್ನು 2024 -25 ನೇ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ವಿಧಾನಪರಿಷತ್ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 2023- 24ನೇ ಸಾಲಿನ ಯೋಜನೆಗೆ ಅನುದಾನವನ್ನು ಹಂಚಿಕೆ ಮಾಡಿ ಅರಣ್ಯ ಹಾಗೂ ಅರಣ್ಯೀತರ ಭೂಪ್ರದೇಶಗಳ ಹಸ್ತಾಂತರಕ್ಕೆ ಆದ್ಯತೆ ಮೇಲೆ ಕ್ರಮ ಕೈಗೊಳ್ಳಲಾಗುವುದು.

ಈ ನಿಟ್ಟಿನಲ್ಲಿ ಯೋಜನೆಯನ್ನು 2024- 25 ನೇ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು ಎಂದರು.

ವಾರಾಹಿ ನೀರಾವರಿ ಯೋಜನೆಗೆ 1997ರಲ್ಲಿ 9.43 ಕೋಟಿ ರೂಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿತ್ತು .2003-24 ಸಾಲಿಗೆ ಪರಿಷ್ಕೃತ ಅಂದಾಜು 569 ಕೋಟಿ ರೂ.ಆಯಿತು. 2014-15ರಲ್ಲಿ 1,789 ಕೋಟಿ ರೂ.ಗಳಿಗೆ ಪರಿಷ್ಕೃತ ಡಿಪಿಆರ್ ಸಿದ್ಧಪಡಿಸಲಾಯಿತು. ಅದರಂತೆ 20203 ರಿ ಮೇ ಅಂತ್ಯಕ್ಕೆ 1,302 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ ಎಂದರು.

Related Articles

Back to top button