ಪ್ರವಾಸೋದ್ಯಮ

ಕಣ್ಣ ಮುಂದೆಯೇ ಜಲಪಾತದಲ್ಲಿ ಕೊಚ್ಚಿ ಹೋದ ಒಂದೇ ಕುಟುಂಬದ 5 ಮಂದಿ ಸಾವು

Views: 349

ಮುಂಬೈ: ಪ್ರವಾಸಕ್ಕೆ ಬಂದಿದ್ದ ಒಂದೇ ಕುಟುಂಬದ ಓರ್ವ ಮಹಿಳೆ ಹಾಗೂ ನಾಲ್ವರು ಮಕ್ಕಳು ಜಲಪಾತಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಈಗಾಗಲೇ 2 ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಪುಣೆಯ ಲೋನಾವಾಲಾ ಪ್ರದೇಶದ ಭೂಶಿ ಅಣೆಕಟ್ಟಿನ ಹಿನ್ನೀರಿನ ಸಮೀಪದ ಜಲಪಾತದಲ್ಲಿ ಈ ಘಟನೆ ನಡೆದಿದೆ.

ಒಂದೇ ಕುಟುಂಬದ ಏಳು ಮಂದಿ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ.  ಅವರಲ್ಲಿ ಇಬ್ಬರು ಮಾತ್ರ ಈಜಿ ಬಚಾವಾಗಿದ್ದಾರೆ. ಮುಂಬೈನಿಂದ ಕೇವಲ 80 ಕಿ.ಮೀ ದೂರದಲ್ಲಿರುವ ಗಿರಿಧಾಮದಲ್ಲಿ ಏಳು ಜನರ ಕುಟುಂಬವು ರಜಾದಿನಗಳನ್ನು ಕಳೆಯಲು ಬಂದಿದ್ದರು.

ಪುಣೆಯ ಸಯ್ಯದ್ ನಗರಕ್ಕೆ ಸೇರಿದ ಒಂದೇ ಕುಟುಂಬದ 5 ಜನರು ಮೃತಪಟ್ಟಿದ್ದಾರೆ. ಇವರೆಲ್ಲ ಪ್ರವಾಸಕ್ಕೆಂದು  ಭೂಶಿ ಅಣೆಕಟ್ಟಿನ ಹಿನ್ನೀರಿನ ಸಮೀಪದ ಜಲಪಾತಕ್ಕೆ ಬಂದಿದ್ದರು. ಈ ವೇಳೆ ನೀರಿನಲ್ಲಿ ಈಜಾಡುವಾಗ ಜಾರಿ ಜಲಪಾತಕ್ಕೆ ಬಿದ್ದಿದ್ದಾರೆ. ಪರಿಣಾಮ ಮೇಲಿನಿಂದ ಬಿದ್ದ ರಭಸಕ್ಕೆ ಐವರು ಸಾವನ್ನಪ್ಪಿದ್ದಾರೆ. ಸದ್ಯ ನೀರಲ್ಲಿ ಮುಳುಗಿ ಸಾವನ್ನಪ್ಪಿದವರಿಗಾಗಿ ಹುಡುಕಾಟ ನಡೆಸಲಾಗುತ್ತಿದ್ದು 2 ಮೃತದೇಹಗಳನ್ನು ಈಗಾಗಲೇ ಹೊರ ತೆಗೆಯಲಾಗಿದೆ. ಇನ್ನುಳಿದ ಶವಗಳನ್ನು ಪತ್ತೆ ಹಚ್ಚಲು ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

 

 

Related Articles

Back to top button