ಕರಾವಳಿ
ಬೆಳ್ತಂಗಡಿ ಬಳಿ ಮನೆಯ ಆವರಣದಲ್ಲೇ ನಿವೃತ್ತ ಶಿಕ್ಷಕನ ಭೀಕರ ಕೊಲೆ

Views: 437
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲುವಿನ ಮನೆಯ ಆವಣದಲ್ಲೇ ನಿವೃತ್ತ ಶಿಕ್ಷಕನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಶಿಕ್ಷಕ ಬಾಲಕೃಷ್ಣ ಭಟ್ (83) ಹತ್ಯೆಯಾದವರು. ರಕ್ತ ಸಂಬಂಧಿಯಿಂದಲೇ ಹತ್ಯೆ ನಡೆದಿರುವ ಬಗ್ಗೆ ಶಂಕಿಸಿ, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಬೆಳಾಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು ಇರುವ ಬಾಲಕೃಷ್ಣ ಭಟ್ ಅವರ ಮನೆಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವೃತ್ತಿಯಲ್ಲಿ ಶಿಕ್ಷಕರಾಗಿದ್ದ ಬಾಲಕೃಷ್ಣ ಭಟ್ ಅವರು ಕೊಲ್ಪಾಡಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಅವರ ಪತ್ನಿ ಲೀಲಾ ಅವರು ಕೂಡ ಬೆಳಾಲಿನಲ್ಲಿ ಶಿಕ್ಷಕಿಯಾಗಿದ್ದು ನಿವೃತ್ತಿ ಹೊಂದಿದ್ದರು. ಕೆಲವು ವರ್ಷಗಳ ಹಿಂದೆ ಅವರು ತೀರಿಕೊಂಡಿದ್ದರು.