ಇತರೆಜನಮನ

HSRP ಅಳವಡಿಸಲು ಕೊನೆಯ ದಿನಾಂಕ ಯಾವುದು?..ಇಲ್ಲದಿದ್ದರೆ ಈ ದಿನಾಂಕದಿಂದಲೇ ದಂಡ?

Views: 109

ಕನ್ನಡ ಕರಾವಳಿ ಸುದ್ದಿ: ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ಪ್ಲೇಟ್‌ (ಹೆಚ್ಎಸ್ಆರ್ಪಿ) ಅನ್ನು ಸವಾರರು ಅಳವಡಿಸದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತೆ ಗಡುವು ವಿಸ್ತರಣೆ ಮಾಡಿದೆ. ಈಗಾಗಲೇ 4 ಬಾರಿ ದಿನಾಂಕ ವಿಸ್ತರಣೆ ಮಾಡಿದರೂ ತಮ್ಮ ವಾಹನಗಳಿಗೆ ಈ ನಂಬರ್ ಪ್ಲೇಟ್ ಅಳವಡಿಸಿಲ್ಲದ ಕಾರಣ ಈಗ ದಿನಾಂಕ ವಿಸ್ತರಣೆ ಮಾಡಲಾಗಿದೆ.

ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸರ್ಕಾರ ನವೆಂಬರ್ 30ರ ವರೆಗೆ ಮತ್ತೊಮ್ಮೆ ಗಡುವು ನೀಡಿದೆ. ಈ ದಿನಾಂಕದ ಒಳಗೆ ಮಾಲೀಕರು ತಮ್ಮ ವಾಹನಗಳಿಗೆ ನಂಬರ್ ಪ್ಲೇಟ್ ಅಳವಡಿಕೆ ಮಾಡಬೇಕು. ಒಂದು ವೇಳೆ ಈ ದಿನಾಂಕದ ಒಳಗೆ ನಂಬರ್ ಪ್ಲೇಟ್ ಅಳವಡಿಕೆ ಮಾಡದಿದ್ದರೇ ಮುಂದಿನ ತಿಂಗಳು ಅಂದರೆ ಡಿಸೆಂಬರ್ 1 ರಿಂದ ದಂಡ ವಿಧಿಸಲಾಗುತ್ತದೆ.

1.90 ಕೋಟಿ ಹಳೆ ವಾಹನಗಳಲ್ಲಿ ಕೇವಲ 55 ಲಕ್ಷ ವಾಹನಗಳಿಗೆ ಮಾತ್ರ ಈ ನಂಬರ್ ಪ್ಲೇಟ್ ಅನ್ನು ಅಳವಡಿಸಲಾಗಿದೆ. ಇನ್ನುಳಿದವರು ಈ ನಂಬರ್ ಪ್ಲೇಟ್ ಅನ್ನು ಹಾಕಿಸಿಲ್ಲ. ಹೀಗಾಗಿ ಸರ್ಕಾರ ವಾಹನಗಳ ಮಾಲೀಕರಿಗೆ ಮತ್ತೊಂದು ಅವಕಾಶ ಕೊಟ್ಟಿದ್ದು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಇಲ್ಲದಿದ್ದರೇ ಸರ್ಕಾರಕ್ಕೆ ದಂಡ ಕಟ್ಟಬೇಕಾಗುತ್ತದೆ.

 

Related Articles

Back to top button