ಜನಮನ

ರೇಷನ್ ಕಾರ್ಡ್ ಬೆನ್ನಲ್ಲೇ ಲೇಬರ್ ಕಾರ್ಡ್ ರದ್ದು?  ಕಾರ್ಮಿಕರಿಗೆ ಬಿಗ್ ಶಾಕ್!

Views: 156

ಕನ್ನಡ ಕರಾವಳಿ ಸುದ್ದಿ :ಈಗಾಗಗಲೇ ರಾಜ್ಯದಲ್ಲಿ 22,62,482 ರೇಷನ್ ಕಾರ್ಡ್‌ಗಳು ರದ್ದಾಗಿದ್ದು ಇದೀಗ 2.46 ಲಕ್ಷ ಕಾರ್ಮಿಕರ ಕಾರ್ಡ್ ರದ್ದು ಮಾಡಲಾಗುತ್ತದೆ ಎಂದು ಹೇಳಲಾಗಿದೆ. ಕಾರ್ಮಿಕ ಇಲಾಖೆಯು ಈಗಾಗಲೇ 2,46,951 ಕಾರ್ಡನ್ನು ನಕಲಿ ಎಂದು ಲಿಸ್ಟ್ ಮಾಡಿದ್ದು, ಎಲ್ಲ ನಕಲಿ ಕಾರ್ಡಗಳನ್ನು ರದ್ದು ಮಾಡಲಾಗುತ್ತದೆ ಎಂದು ಹೇಳಲಾಗಿದೆ.

ಬೆಂಗಳೂರು, ಆದಾಯದ ಮಿತಿ ನೆಪವೊಡ್ಡಿ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದು ಪಡಿಸುವ ಸರ್ಕಾರದ ತೀರ್ಮಾನಕ್ಕೆ ರಾಜ್ಯದೆಲ್ಲೆಡೆ ಸಾರ್ವಜನಿಕರಿಂದ ಭಾರೀ ಆಕೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ರಾಜ್ಯದ ಕಟ್ಟಡ ಕಾರ್ಮಿಕರ ಕಾರ್ಡ್ಗಳನ್ನು ರದ್ದು ಮಾಡಲು ಸರ್ಕಾರ ಸಿದ್ದತೆ ನಡೆಸಿದೆ.

ಕೇಂದ್ರ ಸರ್ಕಾರದ ಇ-ಶ್ರಮ ಪೋರ್ಟಲ್ ಸಂಯೋಜಿಸಿ, ಆಧಾರ್ಕಾರ್ಡ್ ಆಧಾರಿತ ನೋಂದಣಿ ಮಾಡುವ ಮೂಲಕ ಅರ್ಹರಿಗೆ ಮಾತ್ರ ಸೌಲಭ್ಯ ಕಲ್ಪಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ.

ಕಟ್ಟಡ, ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಬರೋಬ್ಬರಿ 38 ಲಕ್ಷದ 42 ಸಾವಿರ ಕಾರ್ಮಿಕರ ಹೆಸರು ನೋಂದಣಿಯಾಗಿದೆ. 38.42 ಲಕ್ಷದ ಪೈಕಿ 2.46 ಸಾವಿರ ಕಾರ್ಡ್ ಅಮಾನತು ಮಾಡಲಾಗುತ್ತಿದೆ. ಹಾವೇರಿಯಲ್ಲಿ ಅತೀ ಹೆಚ್ಚು 1,69,180 ಕಾರ್ಡ್ ಗಳು ರದ್ದಾಗಲಿವೆ.

ಮದುವೆ, ಮರಣ, ಹೆರಿಗೆ, ಅಪಘಾತ ಸಂದರ್ಭದಲ್ಲಿ ದೊಡ್ಡ ಮೊತ್ತದ ಆರ್ಥಿಕ ನೆರವು ದೊರೆಯುತ್ತದೆ. ಈ ಹಿನ್ನೆಲೆಯಲ್ಲಿ ನಕಲಿ ಜಾಬ್ ಕಾರ್ಡ್ಗಳ ಸೃಷ್ಟಿಯಾಗಿವೆ. ಆನ್ ಲೈನ್ನಲ್ಲೇ ಅರ್ಜಿ ಸಲ್ಲಿಸಿ ಕಾರ್ಡ್ ಪಡೆಯುವ ಅವಕಾಶ ಇದ್ದು, ಲಕ್ಷಾಂತರ ಜನ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದರಿಂದ ಕಾರ್ಮಿಕ ಇಲಾಖೆಗೆ ದಾಖಲೆ ಪರಿಶೀಲನೆ ಕಷ್ಟವಾಗ್ತಿದೆ. ಇದು ನಕಲಿ ಕಾರ್ಡ್ ಪಡೆಯುವವರಿಗೆ ಅನುಕೂಲವಾಗಿದೆ.

ಮೊಬೈಲ್ ಆಪ್ ಮೂಲಕ ಇ-ಹಾಜರಾತಿ ಸವಲತ್ತು ಕಲ್ಪಿಸಲು ಪ್ಲ್ಯಾನ್, ಮಾಡಲಾಗಿದೆ. ಕಟ್ಟಡ ಇತರೆ ನಿರ್ಮಾಣ ಕಾಮಗಾರಿ ನಡೆಯುವ ಸ್ಥಳಕ್ಕೆ ಮೊಬೈಲ್ ವ್ಯಾನ್ ತೆರಳಿ, ಖುದ್ದು ಕಾರ್ಮಿಕರ ನೋಂದಣಿ ಮಾಡಲು ಯೋಜನೆ ರೂಪಿಸಲಾಗಿದೆ. ಸ್ಥಳದಲ್ಲೇ ಇ-ಕಾರ್ಡ್ ಕೊಡುವ ವ್ಯವಸ್ಥೆಯನ್ನೂ ಜಾರಿಗೆ ತರಲು ತಯಾರಿ ನಡೆಸಲಾಗುತ್ತಿದೆ.

ಕಾರ್ಮಿಕ ಇಲಾಖೆ ಡಾ.ಬಿ.ಆರ್.ಅಂಬೇಡ್ಕರ್ ಸೇವಾ ಕೇಂದ್ರ ಸ್ಥಾಪಿಸಿ, ನೈಜ ಕಟ್ಟಡ ಕಾರ್ಮಿಕರಿಗೆ ಸವಲತ್ತು ದೊರಕಿಸಿಕೊಡುವುದರ ಜೊತೆಗೆ ನಕಲಿ ಕಾರ್ಡ್ ಪತ್ತೆಗೂ ಸರ್ಕಾರ ಇದೀಗ ಹೆಜ್ಜೆ ಇಟ್ಟಿದೆ. ವಲಸಿಗರಾಗಿರುವುದರಿಂದ ಕೆಲಸಕ್ಕಾಗಿ ಒಂದು ಊರಿನಿಂದ ಇನ್ನೊಂದು ಊರಿಗೆ ತೆರಳುತ್ತಾರೆ. ಹೋದಲ್ಲೆಲ್ಲ ನೋಂದಣಿ ಮಾಡುವ ಬದಲು ಪೋರ್ಟ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಒಂದು ಬಾರಿ ಪಡೆದ ಕಾರ್ಡ್ ಎಲ್ಲೇ ಕೆಲಸ ಮಾಡಿದರೂ, ಅದರಲ್ಲಿ ಮಾಹಿತಿ ಅಡಕವಾಗುವ ಏರ್ಪಾಡು ಮಾಡಲಾಗುತ್ತದೆ.

ಏನು ಲಾಭ? : ಕಾರ್ಡ್ ಹೊಂದಿದವರಿಗೆ ಹಲವು ಸೌಲಭ್ಯ ಸಿಗುತ್ತಿವೆ. ವಯೋ ನಿವೃತ್ತಿ ಪಿಂಚಣಿ, ಅಂಗವಿಕಲ ಪಿಂಚಣಿ, ಟೂಲ್ ಕಿಟ್, ವಸತಿ ಸೌಲಭ್ಯ, ಹೆರಿಗೆ, ಶೈಕ್ಷಣಿಕ ಸಹಾಯಧನ, ವೈದ್ಯಕೀಯ ಸಹಾಯಧನ ಸೌಲಭ್ಯ, ಅಪಘಾತ ಪರಿಹಾರ, ಮದುವೆ ಸಹಾಯಧನ, ಅಂತ್ಯಕ್ರಿಯೆ ವೆಚ್ಚ ಹೀಗೆ 15ಕ್ಕೂ ಹೆಚ್ಚು ಸೌಲಭ್ಯಗಳಿಗೆ ಆರ್ಥಿಕ ನೆರವನ್ನು ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೀಡುತ್ತಿದೆ.

ರಾಜ್ಯ ಕಾರ್ಮಿಕರ ಕಾರ್ಡ್ಗಳ ಜಿಲ್ಲಾವಾರು ಪಟ್ಟಿ :

ಮೈಸೂರು- 1316

ಚಾಮರಾಜನಗರ- 743

ಬಾಗಲಕೋಟೆ- 2039

ಬೆಂ.ಗ್ರಾಮಾಂತರ-402

ಬೆಂ.ನಗರ- 2967

ಬೆಳಗಾವಿ- 1136

ಬಳ್ಳಾರಿ- 1498

ಬೀದರ್- 25,759

ವಿಜಯಪುರ- 2097

ಚಿಕ್ಕಬಳ್ಳಾಪುರ- 1242

ಚಿಕ್ಕಮಗಳೂರು- 1173

ಚಿತ್ರದುರ್ಗ- 859

ದಕ್ಷಿಣ ಕನ್ನಡ- 1076

ದಾವಣಗೆರೆ- 3659

ಧಾರವಾಡ- 3503

ಗದಗ- 3051

ಕಲಬುರಗಿ- 2280

ಹಾಸನ-2266

ಹಾವೇರಿ- 1,69,180

ಕೊಡಗು- 175

ಕೋಲಾರ- 1988

ಕೊಪ್ಪಳ- 2083

ಮಂಡ್ಯ- 396

ರಾಯಚೂರು- 383

ರಾಮನಗರ- 2748

ಶಿವಮೊಗ್ಗ- 6900

ತುಮಕೂರು- 1210

ಉಡುಪಿ- 210

ಉತ್ತರ ಕನ್ನಡ-4155

ಯಾದಗಿರಿ- 457

Related Articles

Back to top button
error: Content is protected !!