ಶಿಕ್ಷಣ
ಹೆಮ್ಮಾಡಿ ಜನತಾ ಕಾಲೇಜಿನ ಶ್ರುತಿಕಾ ಶೆಟ್ಟಿ ಜಿಲ್ಲಾ ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ

Views: 359
ಹೆಮ್ಮಾಡಿ ;ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಉಡುಪಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಕರ್ನಾಟಕ 50 ರ ಸಂಭ್ರಮಾಚರಣೆಯ ಪ್ರಯಕ್ತ ಆಯೋಜಿಸಿದ ಜಿಲ್ಲಾ ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನ ಶ್ರುತಿಕಾ ಶೆಟ್ಟಿ ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿರುತ್ತಾಳೆ.
ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು/ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.







