ಸಾಂಸ್ಕೃತಿಕ

ಬಿಗ್‌ಬಾಸ್ ಮನೆಯಿಂದ ಬಂದು ಕೋರ್ಟ್ ಗೆ ಹಾಜರಾದ ಚೈತ್ರಾ ಕುಂದಾಪುರ

Views: 199

ಬೆಂಗಳೂರು: ಕಿರುತೆರೆಯ ಬಿಗ್‌ಬಾಸ್ ಸೀಸನ್- 11ರ ಸ್ಪರ್ಧಿಯಾಗಿರುವ ಚೈತ್ರಾ ಕುಂದಾಪುರ ಅವರು ಇಂದು ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಬೈಂದೂರು ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಎಂಎಎಲ್ಎ ಅಭ್ಯರ್ಥಿ ಟಿಕೆಟ್ ಕೊಡಿಸುವುದಾಗಿ ಬಹುಕೋಟಿ ವಂಚಿಸಿದ ಆರೋಪ ಪ್ರಕರಣದಲ್ಲಿ ಆರೋಪಿಯಾಗಿರುವ ಚೈತ್ರಾ ಕುಂದಾಪುರ ಸೇರಿದಂತೆ ಮೂವರು ಆರೋಪಿಗಳಿಗೆ ನ್ಯಾಯಾಲಯ ನೋಟಿಸ್ ಜಾರಿಗೊಳಿಸಿತ್ತು.

ನೋಟಿಸ್ ಬಂದ ಹಿನ್ನೆಲೆ ಬಿಗ್‌ಬಾಸ್ ಮನೆಯಿಂದ ಹೊರಬಂದ ಚೈತ್ರಾ, ನಗರದ 1ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರಾಗಿ ವಾಪಾಸ್ ತೆರಳಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿ ಟಿಕೆಟ್ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ್ದ ಆರೋಪದಡಿ ಚೈತ್ರಾ ಅವರನ್ನು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿತ್ತು. ಬಳಿಕ ಜಾಮೀನು ಪಡೆದಿದ್ದ ಚೈತ್ರಾ, ಸ್ಪರ್ಧಿಯಾಗಿ ಬಿಗ್‌ಬಾಸ್ ಮನೆ ಪ್ರವೇಶಿಸಿದ್ದರು.

Related Articles

Back to top button