ಕ್ರೀಡೆ

ಹೆಮ್ಮಾಡಿಯ ಜನತಾ ಪಪೂ ಕಾಲೇಜಿನ‌ ಸೂರಜ್ ಪೂಜಾರಿ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಕ್ಕೆ ಆಯ್ಕೆ

Views: 238

ಕನ್ನಡ ಕರಾವಳಿ ಸುದ್ದಿ:ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸುವ ರಾಷ್ಟ್ರ ಮಟ್ಟದ ವಾಲಿಬಾಲ್ ಸ್ಪರ್ಧೆಗೆ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿ ಸೂರಜ್ ಪೂಜಾರಿ ರಾಷ್ಟ್ರ ಮಟ್ಟದ ವಾಲಿಬಾಲ್ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ. ತೆಲಂಗಾಣ ರಾಜ್ಯದಲ್ಲಿಈ ಸ್ಪರ್ಧೆ ನಡೆಯಲಿದ್ದು,ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾನೆ.

ಸಾಧಕ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆಗಳೂಂದಿಗೆ,ಶುಭ ಹಾರೈಸಿದ್ದಾರೆ.

Related Articles

Back to top button
error: Content is protected !!