ಇತರೆ

ನಕ್ಸಲರು ಮುಚ್ಚಿಟ್ಟಿದ್ದ ಎಕೆ 47 ಸೇರಿದಂತೆ ಶಸ್ತ್ರಾಸ್ತ್ರಗಳು ಕೊನೆಗೂ ಪತ್ತೆ

Views: 102

ಕನ್ನಡ ಕರಾವಳಿ ಸುದ್ದಿ: ಪಶ್ಚಿಮ ಘಟ್ಟಗಳಲ್ಲಿ ಎರಡು ದಶಕದಿಂದ ಬೇರೂರಿದ್ದ 6 ನಕ್ಸಲರು ಸರ್ಕಾರದ ಮುಂದೆ ಶರಣಾಗಿದ್ದಾರೆ. ಶರಣಾದ ಎಲ್ಲರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಶರಣಾದ ಒಂದೇ ದಿನದಲ್ಲಿ ಮೂರು ಲಕ್ಷ ಪ್ಯಾಕೇಜ್ ಜಿಲ್ಲಾಧಿಕಾರಿ ಖಾತೆಗೆ ವರ್ಗಾವಣೆ ಆಗಿದೆ. ಮತ್ತೊಂದು ಕಡೆ ಎನ್ಐಎ ತನಿಖೆಗೆ ಆಗ್ರಹಿಸಿ ಕೇಂದ್ರ ಗೃಹ ಇಲಾಖೆಗೆ ಬಿಜೆಪಿ ಮೊರೆ ಹೋಗುತ್ತಿದೆ.

ಶರಣಾಗತಿ ನಂತರ ನ್ಯಾಯದ ಪ್ರಕ್ರಿಯೆ ಶುರುವಾಗಿದೆ. 6 ಜನ ನಕ್ಸಲರನ್ನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ನಂತರ ಎನ್‌ಐಎ ವಿಶೇಷ ಕೋರ್ಟ್ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರು 6 ನಕ್ಸಲರಿಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು. ಒಟ್ಟು 14 ದಿನಗಳ ಕಾಲ ಅಂದ್ರೆ ಜನವರಿ 30ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನ್ಯಾಯಾಂಗ ಬಂಧನ ಬೆನ್ನಲ್ಲೆ ನಕ್ಸಲರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ಇದೆಲ್ಲದರ ನಡುವೆ ಈಗ ನಕ್ಸಲರ ಗನ್ ಗಳು ಪತ್ತೆಯಾಗಿವೆ. ಕಿತ್ತಲೇಗಂಡಿ ಕಾಡಿನಲ್ಲಿ 5 ಗನ್ಗಳು ಪತ್ತೆಯಾಗಿವೆ. ಎಕೆ 47, 303ಕೋವಿ, ಒಂದು ಪಿಸ್ತೂಲ್ ಮತ್ತು 100ಕ್ಕೂ ಹೆಚ್ಚು ಗುಂಡುಗಳು ಜಯಪುರ ಸಮೀಪದ ಕಿತ್ತಲೆಗಂಡಿ ಕಾಡಿನಲ್ಲಿ ಪತ್ತೆಯಾಗಿವೆ. ಗನ್ ಗಳು ರದ್ದು ಎಂಬುದು ಸ್ಪಷ್ಟವಾಗಿಲ್ಲ. ಈ ಗನ್ಗಳು ನಕ್ಸಲರದ್ದೇನಾ ಎಂಬುದು ತನಿಖೆಯಿಂದಷ್ಟೇ ಗೊತ್ತಾಗಬೇಕಿದೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರ ಠಾಣಾ ವ್ಯಾಪ್ತಿಯಲ್ಲಿ ಗನ್ಗಳು ಪತ್ತೆಯಾಗಿವೆ. ಸದ್ಯ ಆಯುಧ ಆ್ಯಕ್ಟ್ ಅಡಿಯಲ್ಲಿ ಅಪರಿಚತರು ಎಂದು ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ

Related Articles

Back to top button