ಅಮೆರಿಕದ 47ನೇ ಅಧ್ಯಕ್ಷರಾಗಿ ಟ್ರಂಪ್ ಪ್ರಮಾಣವಚನ

Views: 43
ಅಮೆರಿಕ: ಡೊನಾಲ್ಡ್ ಟ್ರಂಪ್ ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು.ಅಮೆರಿಕ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಜಾನ್ ರಾಬರ್ಟ್ಸ್ ಅವರು ಪ್ರಮಾಣ ವಚನ ಬೋಧಿಸಿದರು.
40 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಅಮೆರಿಕ ಅಧ್ಯಕ್ಷ ಪ್ರಮಾಣವಚನ ಸ್ವೀಕಾರ ಸಮಾರಂಭ ಕ್ಯಾಪಿಟಲ್ ರೊಟುಂಡಾ ಒಳಾಂಗಣ ಸಭಾಂಗಣದಲ್ಲಿ ನಡೆದಿದೆ.
ಜೆಡಿ ವ್ಯಾನ್ಸ್ ಉಪಾಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮುಂದಿನ ನಾಲ್ಕು ವರ್ಷಗಳು ಅಮೆರಿಕ ಅಭಿವೃದ್ಧಿಗಾಗಿ ತಾವು ರೂಪಿಸಿರುವ ಯೋಜನೆಗಳು, ಕನಸುಗಳ ಬಗ್ಗೆ ಭಾಷಣ ಮಾಡಿದರು. ಅಮೆರಿಕವನ್ನು ಮತ್ತೆ ಗ್ರೇಟ್ ಮಾಡುವುದಾಗಿ ಶಪಥ ಮಾಡಿದರು.
ಟ್ರಂಪ್ ಗೂ ಮುನ್ನ ಉಪಾಧ್ಯಕ್ಷರಾಗಿ ಜೆಡಿ ವ್ಯಾನ್ಸ್ ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ನಿರ್ಗಮಿತ ಅಧ್ಯಕ್ಷ ಜೋ ಬೈಡನ್, ಮಾಜಿ ಅಧ್ಯಕ್ಷ ಬರಾಕ್ ಒಬಾಮ, ಭಾರತದ ಉದ್ಯಮಿ ಮುಖೇಶ್ ಅಂಬಾನಿ ಭಾಗಿಯಾಗಿದ್ದರು.
ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್, ಟ್ರಂಪ್ ಅವರ ಕುಟುಂಬ ಮತ್ತು ಕ್ಯಾಬಿನೆಟ್ ಸದಸ್ಯರ ಜೊತೆಗೆ, ಎಲೋನ್ ಮಸ್ಕ್, ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್, ಅಮೆಜಾನ್ ಮುಖ್ಯಸ್ಥ ಜೆಫ್ ಬೆಜೋಸ್ ಮತ್ತು ಗೂಗಲ್ ಸಿಇಒ ಸುಂದರ್ ಪಿಚೈ ಸೇರಿದಂತೆ ಟೆಕ್ ಉದ್ಯಮಿಗಳು, ಗಣ್ಯರು ಕ್ಯಾಪಿಟಲ್‌ನಲ್ಲಿ ಉಪಸ್ಥಿತರಿದ್ದರು