ಶಿಕ್ಷಣ

ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ

Views: 626

ಕನ್ನಡ ಕರಾವಳಿ ಸುದ್ದಿ:ಕಿರಿಮಂಜೇಶ್ವರ ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಜಿ.25 ರಂದು ಅದ್ದೂರಿಯಾಗಿ ಆಚರಿಸಲಾಯಿತು.

ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಮತದಾನದ ಪ್ರತಿಜ್ಞಾವಿಧಿಯನ್ನು ಬೋಧಿಸುವುದರ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಮುಖ್ಯ ಶಿಕ್ಷಕಿ ಕುಮಾರಿ ದೀಪಿಕಾ ಆಚಾರ್ಯ ಅವರು ಮಾತನಾಡಿ, ಭಾರತದಂತಹ ಪ್ರಪಂಚದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರಬುದ್ಧ ಮತದಾರರು ದೇಶದ ಆಸ್ತಿ, ದೇಶವು ಅಭಿವೃದ್ಧಿ ಪಥದತ್ತ ಸಾಗುವಲ್ಲಿ ಪ್ರಜ್ಞಾವಂತ ಮತದಾರರ ಪಾತ್ರ ಬಹಳ ಹಿರಿದಾಗಿದೆ ಎಂದು ಮತದಾರರು ಹಾಗೂ ಚುನಾವಣೆಯ ಕುರಿತಾಗಿ ಸವಿಸ್ತಾರವಾಗಿ ವಿವರಿಸಿದರು. ಶಿಕ್ಷಕಿ ಕುಮಾರಿ ರಮ್ಯಾ ಅವರು ರಾಷ್ಟ್ರೀಯ ಮತದಾರರ ದಿನಾಚರಣೆಯ ಮಹತ್ವದ ಕುರಿತಾಗಿ ವಿವರಿಸಿದರು.

ಶಿಕ್ಷಕಿ ಪೂರ್ಣಿಮಾ ಅವರು ಸ್ವಾಗತಿಸಿದರು. ಕುಮಾರಿ ದೀಪಿಕಾ ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಶ್ರೀಮತಿ ಆಶಾಲತಾ ವಂದಿಸಿದರು. ಸಮಾಜ ವಿಜ್ಞಾನ ಶಿಕ್ಷಕರಾದ ಸುಬ್ರಮಣ್ಯ ಮರಾಠಿಯವರು ಕಾರ್ಯಕ್ರಮವನ್ನು ಸಂಘಟಿಸಿ ನಿರೂಪಿಸಿದರು.

Related Articles

Back to top button