ಇತರೆ
31 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

Views: 0
ಕುಂದಾಪುರ: ಕಳೆದ 31 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಳೆ ಆರೋಪಿಯನ್ನು ಕುಂದಾಪುರ ಶಂಕರನಾರಾಯಣ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ ಮೂಲದ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕು ನಿವಾಸಿ ಹೊನ್ನಯಾನೆ ಹೊನ್ನಪ್ಪ ಬಂಧಿತ ಆರೋಪಿಯಾಗಿದ್ದಾರೆ.
ಇಲ್ಲಿನ ಶಂಕರ ನಾರಾಯಣ ಗ್ರಾಮದಲ್ಲಿ 1993ರಲ್ಲಿ ಕಳವು ಪ್ರಕರಣದಲ್ಲಿ ಸಂಬಂಧಿಸಿ ದಂತೆ ನ್ಯಾಯಾಲಯದಲ್ಲಿ ಹಾಜರಾಗದಕ್ಕೆ ತಲೆ ಮರೆಸಿಕೊಂಡಿದ್ದ ಹೊನ್ನಪ್ಪನನ್ನು ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಶಂಕರನಾರಾಯಣ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.