ಇತರೆ

ಸೌಜನ್ಯ ನ್ಯಾಯಕ್ಕಾಗಿ ಶಾಂತಿಯುತ ಪ್ರತಿಭಟನೆ, ಸಭೆಗಳನ್ನು ನಡೆಸಬಹುದು: ಹೈಕೋರ್ಟ್‌ ಆದೇಶ

Views: 82

ಕನ್ನಡ ಕರಾವಳಿ ಸುದ್ದಿ: ಸೌಜನ್ಯ ನ್ಯಾಯಕ್ಕಾಗಿ ಶಾಂತಿಯುತ ಪ್ರತಿಭಟನೆ, ಸಭೆಗಳನ್ನು ನಡೆಸಬಹುದು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ.

ಮಂಗಳವಾರ ಸಂಜೆ  ಎಐಟಿಯುಸಿ ಸಭಾಂಗಣದಲ್ಲಿ ಆಯೋಜಿಸಿದ್ದ ಸೌಜನ್ಯ ನ್ಯಾಯಕ್ಕಾಗಿ ಸಮಾಲೋಚನಾ ಸಭೆಯನ್ನು ನಿಲ್ಲಿಸುವಂತೆ ಶೇಷಾದ್ರಿಪುರ ಪೊಲೀಸರು ನೀಡಿದ್ದ ನೋಟಿಸ್ ಬಗೆಗಿನ ರಿಟ್ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಈ ಆದೇಶ ನೀಡಿದ್ದಾರೆ.

ಸಾಹಿತಿ-ಚಿಂತಕ- ಹೋರಾಟಗಾರರ ಸಮಾಲೋಚನಾ ಸಭೆಯ ಸಂಚಾಲಕರದಲ್ಲೊಬ್ಬರಾದ ವಿನಯ್ ಶ್ರೀನಿವಾಸ್‌ ಮತ್ತು ವಿಜಯಭಾಸ್ಕರ್ ಪರವಾಗಿ ಹಿರಿಯ ನ್ಯಾಯವಾದಿ ಶ್ರುತಿ ಚಗಂತಿ ರಿಟ್ ಪಿಟೀಷನ್ ಸಲ್ಲಿಸಿದ್ದರು. ರಿಟ್ ಪಿಟೀಷನ್ ಅರ್ಜಿಯ ವಿಚಾರಣೆ ನಡೆಸಿದ ಜಸ್ಟಿಸ್‌ ಎಂ ನಾಗಪ್ರಸನ್ನ “ಪೊಲೀಸರು, ಸರ್ಕಾರ ಸಭೆಯನ್ನು ಪ್ರತಿಭಟನೆಯನ್ನು ಯುವಂತಿಲ್ಲ. ಆದರೆ ಕಾನೂನು ಉಲ್ಲಂಘನೆಯಾದರೆ ಮಾತ್ರ ಪೊಲೀಸರು ಕ್ರಮ ತೆಗೆದುಕೊಳ್ಳಬಹುದು. ಪ್ರತಿಭಟನೆಗಳನ್ನು ಊಹೆಯ ಆಧಾರದಲ್ಲಿ ತಡೆಯುವಂತಿಲ್ಲ” ಎಂದು ಆದೇಶ ನೀಡಿದ್ದಾರೆ.

Related Articles

Back to top button