ಜನಮನ

33 ಇಲಾಖೆಗಳಲ್ಲಿ FDA, SDA ನೇಮಕಾತಿ; 5,431 ಹುದ್ದೆ ಭರ್ತಿಗೆ ಅಧಿಸೂಚನೆ

Views: 52

ಕನ್ನಡ ಕರಾವಳಿ ಸುದ್ದಿ: ರಾಜ್ಯ ಸರ್ಕಾರದ ಒಟ್ಟು 33 ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 5,431 ಪ್ರಥಮ ದರ್ಜೆ ಹಾಗೂ ದ್ವಿತೀಯ ದರ್ಜೆ ಸಹಾಯಕ ಸೇರಿ ವಿವಿಧ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ.

ಅಕ್ಟೋಬರ್ 30ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಅರಂಭವಾಗಲಿದ್ದು, ನವೆಂಬರ್ 25 ಕೊನೆ ದಿನವಾಗಿದೆ. ನ.26ರೊಳಗೆ ಶುಲ್ಕ ಪಾವತಿಸಬೇಕು ಎಂದು ಪ್ರಾಧಿಕಾರದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಉಳಿಕ ಮೂಲ ವೃಂದಕ್ಕೆ ಸಂಬಂಧಿಸಿದಂತೆ 2,163 ಪ್ರಥಮ ದರ್ಜೆ ಹಾಗೂ 2,070 ದ್ವಿತೀಯ ದರ್ಜೆಯ ಹಾಗೂ‌ ಕಲ್ಯಾಣ ಕರ್ನಾಟಕ ವೃಂದದ 563FDA ಹಾಗೂ 635 SDA ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ. FDA ಪದವಿ ಮತ್ತು SDA ಪಿಯುಸಿ ವ್ಯಾಸಂಗ ಪೂರ್ಣಗೊಳಿಸಿರಬೇಕು.

ಈ ಹುದ್ದೆಗಳಿಗೆ 2027ರ ಜನವರಿ 8, 9, 10, 16 ಮತ್ತು 17ರಂದು ಪರೀಕ್ಷೆ ನಡೆಸುವುದಾಗಿ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ಸರಿಯಾಗಿ ಓದಿ ನಂತರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ವಿವರಗಳಿಗೆ ಪ್ರಾಧಿಕಾರದ ವೆಬ್ಸೈಟ್ ನೋಡಬೇಕು ಎಂದು ಕಾರ್ಯನಿರ್ವಾಹಕ ನಿರ್ದೇಶಕರು ಸಲಹೆ ನೀಡಿದ್ದಾರೆ.

ವಿದ್ಯಾರ್ಹತೆ: ಅಭ್ಯರ್ಥಿಗಳು ಪಿಯುಸಿ, ಪದವಿಯ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ: ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18, ಗರಿಷ್ಠ ವಯೋಮಿತಿ 35 ವರ್ಷವಾಗಿದೆ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಈ ಹುದ್ದೆಗಳಿಗೆ ಕೆಇಎ ಅಧಿಕೃತ ಜಾಲತಾಣದ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕದ ಕುರಿತು ಮಾಹಿತಿಗಳಿಗೆ ವಿವರವಾದ ಅಧಿಕೃತ ಅಧಿಸೂಚನೆ ಪರಿಶೀಲಿಸಿಕೊಳ್ಳಬೇಕು.

ಹುದ್ದೆಗಳಿಗೆ ಲಿಖಿತ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಜಾಲತಾಣ cetonline.karnataka.gov.ingಗೆ ಭೇಟಿ ನೀಡಿ.

Related Articles

Back to top button
error: Content is protected !!