ಇತರೆ

ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆ ಕೊಲೆ ಮಾಡಿ ಮೈಮೇಲಿದ್ದ ಚಿನ್ನಾಭರಣ ಕಳವು

Views: 209

ಕನ್ನಡ ಕರಾವಳಿ ಸುದ್ದಿ; ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯನ್ನು ಕಿತ್ತು ಹಿಸುಕಿ ಕೊಲೆ ಮಾಡಿ ಮೈಮೇಲಿದ್ದ ಚಿನ್ನಾಭರಣ ಕಳವು ಮಾಡಿರುವ ಘಟನೆ ಬೆಳಗಾವಿ ಗಣೇಶಪುರದ ಲಕ್ಷ್ಮೀ ನಗರದಲ್ಲಿ ನಡೆದಿದೆ.

ಲಕ್ಷ್ಮೀ ನಗರದ ನಿವಾಸಿ ಅಂಜನಾ ಅಜೀತ ದಢೀಕರ್(49) ಕೊಲೆಯಾದ ಮಹಿಳೆ.ಅಪಾರ್ಟ್‌ಮೆಂಟ್‌ನಲ್ಲಿ ಗಂಡ-ಹೆಂಡತಿ ಮಾತ್ರ ವಾಸ ಮಾಡುತ್ತಿದ್ದರು. ಆಟೋ ಚಾಲಕನಾಗಿದ್ದ ಗಂಡ ಅಜೀತ್ ದಢೀಕರ್  ಸಂಜೆ ಮನೆಗೆ ವಾಪಸ್ ಬಂದಾಗ ಕೊಲೆಯಾಗಿರೋ ಪ್ರಕರಣ ಬೆಳಕಿಗೆ ಬಂದಿದೆ.

ಪ್ರಜ್ಞೆತಪ್ಪಿ ಬಿದ್ದಿದ್ದ ಅಂಜನಾರನ್ನು ಬೆಳಗಾವಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕೊರಳಲ್ಲಿದ್ದ ಮಂಗಳಸೂತ್ರ, ಕಿವಿಯೊಲೆ, ಕೈಯಲ್ಲಿದ್ದ ಬಂಗಾರ ಉಂಗುರ ಕದ್ದು ಕೊಲೆ ಮಾಡಿರುವ ಶಂಕೆಯಿದೆ ಎಂದು ಕುಟುಂಬಸ್ಥರ ಆರೋಪಿಸಿದ್ದಾರೆ. ವಿಧಿವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button