ಕನ್ನಡ ಕರಾವಳಿ ಸುದ್ದಿ: ಬ್ರಹ್ಮಾವರ ಸೈಂಟ್ ಮೇರಿಸ್ ಸಿರಿಯನ್ ಕಾಲೇಜು, ಇದರ ಶಿಕ್ಷಕ -ರಕ್ಷಕ ಸಂಘದ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಬರ್ಟ್ ರಾಡ್ರಿಗಸ್ ಜೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳ ಉಜ್ವಲ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕ -ರಕ್ಷಕ ಸಂಘದ ಮಹತ್ವವನ್ನು ಮನದಟ್ಟು ಮಾಡಿದರು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಪ್ರವೀಣ್ ಕುಮಾರ್ ಶೆಟ್ಟಿ ಅವರು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪೂರಕವಾಗಿ ಕಾಲೇಜು ಹಾಕಿಕೊಂಡಿರುವ ವಿವಿಧ ಯೋಜನೆ,ಕಾರ್ಯಕ್ರಮಗಳನ್ನು ಶ್ಲಾಘಿಸಿದರು.ಈ ನಿಟ್ಟಿನಲ್ಲಿ ಹೆತ್ತವರು ಕಾಲೇಜಿನೊಂದಿಗೆ ನಿರಂತರವಾದ ಸಂಪರ್ಕವನ್ನು ಇಟ್ಟುಕೊಳ್ಳಬೇಕಾದ ಅವಶ್ಯಕತೆಯನ್ನು ತಿಳಿಸಿಕೊಟ್ಟರು.
ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ಹರ್ಷವರ್ಧನ್ ಹೆಗಡೆ ಮತ್ತು ಜೊತೆ ಕಾರ್ಯದರ್ಶಿ ಶ್ರೀಮತಿ ದಿವ್ಯಲತಾ ಉಪಸ್ಥಿತರಿದ್ದರು. ಶಿಕ್ಷಕ-ರಕ್ಷಕ ಸಂಘದ ಕಾರ್ಯದರ್ಶಿ ಶ್ರೀ ಕೀರ್ತಿ ಶೆಟ್ಟಿಗಾರ್ ಪ್ರಸ್ತಾವಿಕ ಮಾತುಗಳನ್ನಾಡಿದರು.
ಉಪನ್ಯಾಸಕರಾದ ಶ್ರೀ ಜ್ಯೂಡ್ಆಲ್ಫ್ರೆಡ್ ಫುರ್ಟಾಡೊ ಸ್ವಾಗತಿಸಿದರು. ವಿದ್ಯಾರ್ಥಿನಿ ನಾಗಶ್ರೀ ಪ್ರಾರ್ಥಿಸಿದರು. ಶ್ರೀಮತಿ ಸುಮಲತಾ ಉಪನ್ಯಾಸಕರು ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು, ಶ್ರೀಮತಿ ಹಲ್ಮಿನ ಮೇರಿ ಮಮತಾ ಅಮನ್ನಾ ಮುಖ್ಯಸ್ಥರು, ರಾಜ್ಯಶಾಸ್ತ್ರ ವಿಭಾಗ ಕಾರ್ಯಕ್ರಮ ನಿರೂಪಿಸಿ ನಿರ್ವಹಿಸಿದರು.ಉಪನ್ಯಾಸಕರಾದ ಶ್ರೀಮತಿ ಆಶಾ ಟಿ.ಕೆ ಧನ್ಯವಾದ ಸಮರ್ಪಣೆ ಮಾಡಿದರು. ಉಪನ್ಯಾಸಕ- ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸೇವಾ ನಿವೃತ್ತರನ್ನು, ರಾಂಕ್ ವಿಜೇತ ವಿದ್ಯಾರ್ಥಿನಿಯರನ್ನು, ಕ್ರೀಡೆ, ಎನ್ ಸಿ ಸಿ ಮುಂತಾದ ಚಟುವಟಿಕೆಗಳಲ್ಲಿ ಪ್ರತಿಭಾನ್ವಿತರಾದ ವಿದ್ಯಾರ್ಥಿ,ವಿದ್ಯಾರ್ಥಿನಿಯರನ್ನು ಗೌರವಿಸಿ ಪ್ರೋತ್ಸಾಹಿಸಲಾಯಿತು.