ಗಾಯಕ ಡಾ.ಗಣೇಶ್ ಗಂಗೊಳ್ಳಿ ಅವರಿಗೆ”ಜೀಶಂಪ ರಾಜ್ಯಪ್ರಶಸ್ತಿ” ಪ್ರದಾನ

Views: 18
ಕನ್ನಡ ಕರಾವಳಿ ಸುದ್ದಿ: ಎಪ್ರಿಲ್ 23ರಂದು ಕನ್ನಡ ಜಾನಪದ ಪರಿಷತ್ ಬೆಂಗಳೂರು ಹಾಗೂ ಚಿಕ್ಕಮಗಳೂರು ಜಿಲ್ಲಾ ಕನ್ನಡ ಜಾನಪದ ಪರಿಷತ್ ಇವರ ದಶಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಶ್ರೀ ವೆಂಕಟೇಶ್ವರ ವಿದ್ಯಾ ಮಂದಿರ ದಾಸಮಠ , ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹುಲ್ಮಕ್ಕಿ ಇಲ್ಲಿ ಪದ್ಮಶ್ರೀ ಸುಕ್ರಿ ಬೊಮ್ಮನ ಗೌಡ ವೇದಿಕೆಯಲ್ಲಿ ನಡೆದ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ಇದರ ಜಿಲ್ಲಾಧ್ಯಕ್ಷರು ಹಾಗೂ 2024/2025 ನೇ ಸಾಲಿನ ಕರ್ನಾಟಕ ಸರಕಾರದ ಕರ್ನಾಟಕ ಜಾನಪದ ಅಕಾಡಮಿ ಬೆಂಗಳೂರು ಇವರ ವಾರ್ಷಿಕ ರಾಜ್ಯಪ್ರಶಸ್ತಿ ಪುರಸ್ಕೃತರಾದ ಪ್ರಸಿದ್ಧ ಗಾಯಕ ಡಾ.ಗಣೇಶ್ ಗಂಗೊಳ್ಳಿ ಇವರಿಗೆ ಶ್ರೀ ಆದಿಚುಂಚನಗಿರಿ ಶಾಖಾ ಮಠ ಇದರ ಪೀಠಾಧೀಶರಾದ ಶ್ರೀ ಶ್ರೀ ಶ್ರೀ ಗುಣನಾಥ ಸ್ವಾಮೀಜಿಯವರು ಗಣ್ಯರ ಉಪಸ್ಥಿತಿಯಲ್ಲಿ, “ಜೀಶಂಪ ರಾಜ್ಯಪ್ರಶಸ್ತಿ” ನೀಡಿ ಆಶೀರ್ವದಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು, ಶೃಂಗೇರಿ ವಿಧಾನ ಸಭಾ ಕ್ಷೇತ್ರದ ಸನ್ಮಾನ್ಯ ಶಾಸಕರಾದ ಶ್ರೀ ಟಿ ಡಿ ರಾಜೇಗೌಡ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಕನ್ನಡ ಜಾನಪದ ಪರಿಷತ್ ರಾಜ್ಯಧ್ಯಕ್ಷರಾದ ಡಾ.ಎಸ್ ಬಾಲಾಜಿ ಅವರು ನೆರವೇರಿಸಿದರು. ಚಿಕ್ಕಮಗಳೂರು ಜಿಲ್ಲಾಧ್ಯಕ್ಷರಾದ ಶ್ರೀ ರತ್ನಾಕರ್ ಓಣಿ ತೋಟ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.