ಶಿಕ್ಷಣ

ಬಸ್ರೂರು ಶ್ರೀ ಶಾರದ ಆಂಗ್ಲ ಮಾಧ್ಯಮ ಶಾಲೆ ಎಸ್ ಎಲ್ ಸಿ ಉತ್ತಮ ಫಲಿತಾಂಶ

Views: 108

ಕನ್ನಡ ಕರಾವಳಿ ಸುದ್ದಿ: ಬಸ್ರೂರು ಶ್ರೀ ಶಾರದ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ಬಸ್ರೂರಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ದಾಖಲಿಸಿದ್ದಾರೆ.

13 ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಬರೆದು ಇದರಲ್ಲಿ ಇಬ್ಬರು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 7 ಮಂದಿ ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ ನಾಲ್ಕು ಮಂದಿ ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿತ್ತಾರೆ.

ಜೆ. ಯೋಗಿತ ಉಡುಪ 625 ಕ್ಕೆ 594 (95.04%) ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದಿರುತ್ತಾಳೆ. ಆಯಿಶಾ ಫಲಕ್ 625 ಕ್ಕೆ 542(86.72%) ಅಂಕ ಗಳಿಸಿ ದ್ವಿತೀಯ ಸ್ಥಾನ, ಮಹಮ್ಮದ್ ರುಮಾನ್ 625ಕ್ಕೆ 513 (82.08%) ಅಂಕ ಗಳಿಸಿ ತೃತೀಯ ಸ್ಥಾನ ಪಡೆದಿರುತ್ತಾನೆ.

ಅತ್ಯುತ್ತಮ ಫಲಿತಾಂಶಕ್ಕಾಗಿ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕ/ಶಿಕ್ಷಕೇತರ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.

Related Articles

Back to top button
error: Content is protected !!