ಸಾಂಸ್ಕೃತಿಕ

ಶ್ರೀಕಾಂತ್ ಕಶ್ಯಪ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಚೈತ್ರಾ ಕುಂದಾಪುರ 

Views: 424

play-sharp-fill
ಕನ್ನಡ ಕರಾವಳಿ ಸುದ್ದಿ: ‘ಬಿಗ್ ಬಾಸ್’ ಖ್ಯಾತಿಯ ಚೈತ್ರಾ ಕುಂದಾಪುರ ಅವರು ಉಡುಪಿ ಹಿರಿಯಡ್ಕದ ಶ್ರೀಕಾಂತ್ ಕಶ್ಯಪ್ ಜೊತೆ ಹಸೆಮಣೆ ಏರಿದ್ದಾರೆ.

ಮೇ 9ರಂದು ಇವರ ಮದುವೆ ಕುಂದಾಪುರದ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ ನಡೆದಿದೆ.ಚೈತ್ರಾ ಮತ್ತು ಶ್ರೀಕಾಂತ್ 12 ವರ್ಷಗಳಿಂದ ಪ್ರೀತಿಸಿದ ಹುಡುಗನೊಂದಿಗೆ ಸರಳ ವಿವಾಹವಾಗಿ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ.

ಕುಟುಂಬಕ್ಕೆ ಆಪ್ತರಾದ 100 ಜನರಿಗೆ ಮಾತ್ರ ಮದುವೆಗೆ ಆಹ್ವಾನ ನೀಡಲಾಗಿತ್ತು. ವೈದಿಕ ಶಾಸ್ತ್ರದಂತೆ ಮದುವೆ ಕಾರ್ಯಕ್ರಮ ನಡೆದಿದೆ. ಈ ಸಂಭ್ರಮದಲ್ಲಿ ಬಿಗ್ ಬಾಸ್ ಸ್ಪರ್ಧಿಗಳಾದ ರಜತ್ ಗೋಲ್ಡ್ ಸುರೇಶ್ ಭಾಗಿಯಾಗಿ ನವದಂಪತಿಗೆ ಶುಭಹಾರೈಸಿದ್ದಾರೆ.

ಕಾಲೇಜಿನಲ್ಲಿ ಓದುತ್ತಿದ್ದಾಗ ಚೈತ್ರಾಗೆ ಶ್ರೀಕಾಂತ್ ಕಶ್ಯಪ್ ಪರಿಚಯವಾಗಿತ್ತು. ಆ್ಯನಿಮೇಷನ್ ಕೋರ್ಸ್ ಮಾಡಿರುವ ಶ್ರೀಕಾಂತ್ ಕಶ್ಯಪ್ ಸುದ್ದಿವಾಹಿನಿವೊಂದರಲ್ಲಿ ಚೈತ್ರಾ ಜೊತೆ ಕೆಲಸ ಮಾಡಿದ್ದರು. ಇದೀಗ ಜ್ಯೋತಿಷ್ಯ, ವಾಸ್ತು, ಪೌರೋಹಿತ್ಯದ ಕೆಲಸದಲ್ಲಿ ಶ್ರೀಕಾಂತ್ ತೊಡಗಿಸಿಕೊಂಡಿದ್ದಾರೆ.

ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಸ್ಪರ್ಧಿಯಾಗಿದ್ದ ರಜತ್ ಬುಜ್ಜಿ ಕೂಡ ಚೈತ್ರಾ ಕುಂದಾಪುರ ಮದುವೆಯಲ್ಲಿ ಇದ್ದರು. ಅಣ್ಣನ ಸ್ಥಾನದಲ್ಲಿ ನಿಂತು ಮದುವೆ ಕಾರ್ಯಗಳನ್ನು ನಡೆಸಿಕೊಟ್ಟಿದ್ದಾರೆ.

 

 

Related Articles

Back to top button