ಕುಂದಾಪುರ: ತೆಕ್ಕಟ್ಟೆಯಲ್ಲಿ ಸಾಲಭಾದೆ ತಾಳಲಾರದೆ ಮೂವರು ಆತ್ಮಹತ್ಯೆಗೆ ಯತ್ನ: ತಂದೆ ಮಗ ಸಾವು, ತಾಯಿ ಗಂಭೀರ

Views: 996
ಕನ್ನಡ ಕರಾವಳಿ ಸುದ್ದಿ: ಉಡುಪಿ ಜಿಲ್ಲೆಯ ತೆಕ್ಕಟ್ಟೆ ಮೀನು ಮಾರ್ಕೆಟ್ ಬಳಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನಿಸಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ಮೇ 15ರ ಬೆಳಿಗ್ಗೆ ಗುರುವಾರ ನಡೆದಿದೆ.
ಅಂಕದಕಟ್ಟೆ ಪೆಟ್ರೋಲ್ ಬಂಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಧವ ದೇವಾಡಿಗ (56), ಹಾಗೂ ಅವರ ಮಗ ಪುಸಾದ್ ದೇವಾಡಿಗ (22) ಮೃತಪಟ್ಟವರು. ತಾಯಿಯ ಪರಿಸ್ಥಿತಿ ಗಂಭೀರವಾಗಿದೆ. ಕಂಚುಗಾರುಬೆಟ್ಟು ನಿವಾಸಿ, ತಾರಾ ದೇವಾಡಿಗ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ.
ಕುಂದಾಪುರದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಮೃತ ದೇಹವನ್ನು ಮೇಲಕ್ಕೆತ್ತಲಾಗಿದೆ. ಕೋಟ ಪೊಲೀಸ್ ಠಾಣೆಯ ಠಾಣಾಧಿಕಾರಿ ರಾಘವೇಂದ್ರ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.
ತಂದೆ ಮತ್ತು ಮಗ ಆತ್ಮಹತ್ಯೆಗೆ ಶರಣಾಗಿರುವುದನ್ನು ತಿಳಿದ ತಾಯಿ, ತಾರಾ ದೇವಾಡಿಗ ಅವರು ಬಾವಿಗೆ ಹಾರಿದ್ದು, ಅವರ ಆಕ್ರಂದನದ ಧ್ವನಿ ಕೇಳಿದ ಸ್ಥಳೀಯ ನಿವಾಸಿಗಳಾದ ಸಂತೋಷ್ ಶೆಟ್ಟಿ, ಶ್ರೀನಾಥ್ ಶೆಟ್ಟಿ ಹಾಗೂ ಸ್ಥಳೀಯರು ರಕ್ಷಣೆಗೆ ಧಾವಿಸಿದರು.
ಮನೆಯಲ್ಲಿ ಡೆತ್ ನೋಟ್ ಸಿಕ್ಕಿದ್ದು, ಬಡ ಕುಟುಂಬಕ್ಕೆ ಸಾಲಬಾಧೆ ಕಾಡುತ್ತಿರುವುದರಿಂದ ಮರ್ಯಾದೆಗಾಗಿ ಅಂಜಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.