ಕ್ರೀಡೆ

ಆರ್‌ಸಿಬಿ ಆಟಗಾರರನ್ನು ಕಣ್ತುಂಬಿಸಿಕೊಳ್ಳಲು ಬಂದಿದ್ದ 9ನೇ ತರಗತಿ ದಿವ್ಯಾಂಶಿ, ಇಂಜಿನಿಯರ್ ಸಹನಾ ಸಾವು

Views: 172

ಕನ್ನಡ ಕರಾವಳಿ ಸುದ್ದಿ:ಚಿನ್ನಸ್ವಾಮಿ ಕ್ರಿಡಾಂಗಣದ ಬಳಿ ನೂಕು ನುಗ್ಗಲು ಉಂಟಾಗಿ 11 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಆರ್‌ಸಿಬಿ ಆಟಗಾರರನ್ನು, ಟ್ರೋಫಿಯನ್ನು, ಕಣ್ತುಂಬಿಕೊಳ್ಳೋಕೆ ಬಂದಿದ್ದ ಫ್ಯಾನ್ಸ್ ಸ್ಟೇಡಿಯಂ ಒಳಗೆ ನುಗ್ಗಲು ಯತ್ನಿಸಿದರು. ಈ ವೇಳೆ ಕಾಲ್ತುಳಿತ ಸಂಭವಿಸಿ ದುರಂತ ನಡೆದಿದೆ. ಹಲವರು ಅಸ್ವಸ್ಥಗೊಂಡಿದ್ದು, ಸದ್ಯ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೋರಿಂಗ್‌ ಆಸ್ಪತ್ರೆಯಲ್ಲಿ 14 ವರ್ಷದ ಬಾಲಕಿ ದಿವ್ಯಾಂಶಿ ಮೃತಪಟ್ಟಿದ್ದಾರೆ. ಯಲಹಂಕ ಕಣ್ಣೂರಿನ ನಿವಾಸಿ ಶಿವಕುಮಾರ್, ಅಶ್ವಿನಿ ದಂಪತಿ‌ ಮಗಳಾದ ದಿವ್ಯಾಂಶಿ ಒಂಭತ್ತನೇ ತರಗತಿಯಲ್ಲಿ ಓದುತ್ತಿದ್ದಳು. ದಿವ್ಯಾಂಶಿ ಇಂದು ಚಿನ್ನಸ್ವಾಮಿ ಸ್ಟೇಡಿಯಂಗೆ ಚಿಕ್ಕಮ್ಮ ರಚನಾ ಇನ್ನಿಬ್ಬರ ಜೊತೆ ಬಂದಿದ್ದರು ದಿವ್ಯಾಂಶಿ ಕಾಲ್ತುಳಿತಕ್ಕೆ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ.

ಕೋಲಾರದ ಕೆಜಿಎಫ್ ತಾಲೂಕಿನ ಬಡಮಾಕನಹಳ್ಳಿ ಗ್ರಾಮದ ಸಹನಾ (24) ಮೃತಪಟ್ಟ ಯುವತಿ. ಸಹನಾ ಶಿಕ್ಷಕ ದಂಪತಿಯಾದ ಸುರೇಶ ಬಾಬು ಹಾಗೂ ಮಂಜುಳಾ ದಂಪತಿಯ ಮಗಳು. ಇತ್ತೀಚೆಗಷ್ಟೇ ಇಂಜಿನಿಯರಿಂಗ್ ಮುಗಿಸಿದ್ದ ಯುವತಿ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ದಿವ್ಯಾಂಶಿ (13), ದಿಯಾ (26), ಶರವಣ (21), ದೇವಿ, ಶಿವು (17), ಮನೋಜ್, ಭೂಮಿಕ್ (21), ಸಹನಾ, ಪೂರ್ಣಚಂದ್ರ (24) ಮೃತ ದುರ್ದೈವಿಗಳು. ಬೌರಿಂಗ್ ಆಸ್ಪತ್ರೆಯಲ್ಲಿ 6 ಮಂದಿ ಮೃತಪಟ್ಟಿದ್ದು, 24 ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗ್ತಿದೆ. 13 ವರ್ಷದ ದಿವ್ಯಾಂಶಿ, 26 ವರ್ಷದ ದಿಯಾ, 21 ವರ್ಷದ ಶರವಣ, ದೇವಿ, 17 ವರ್ಷದ ಶಿವು, ಮನೋಜ್ ಬೌರಿಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವೈದೇಹಿ ಆಸ್ಪತ್ರೆಯಲ್ಲಿ 4 ಮಂದಿ ಕೊನೆಯುಸಿರೆಳೆದಿದ್ದು, 12 ಮಂದಿಗೆ ಚಿಕಿತ್ಸೆ ನೀಡಲಾಗ್ತಿದೆ.

ದುರಂತ ಸಂಭವಿಸಿದ ತಕ್ಷಣ ಕೆಲ ಗಾಯಾಳುಗಳನ್ನು ವೈದೇಹಿ ಆಸ್ಪತ್ರೆಗೆ ದಾಖಲು ಮಾಡಲಾಯ್ತು. ಈ ಪೈಕಿ ಓರ್ವ ಮಹಿಳೆ ಹಾಗೂ ಮೂವರು ಯುವಕರು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ವೈದೇಹಿ ಆಸ್ಪತ್ರೆಯ ವೈದ್ಯೆ ಎಂ.ಎಸ್ ಹುಮೇರಾ ತಿಳಿಸಿದರು. ನಾಲ್ವರು ಕೂಡ ಆಸ್ಪತ್ರೆಗೆ ಕರೆತುರುವಾಗಲೇ ಸಾವನ್ನಪ್ಪಿದ್ದಾರೆ. ಎಂದು ಮಾಹಿತಿ ನೀಡಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿ ಅಭಿಮಾನಿಗಳು ಸಾವನ್ನಪಿರುವ ಸುದ್ದಿ ತಿಳಿಯುತ್ತಿದ್ದಂತೆ ಸಿಎಂ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ವಿಚಾರಿಸಿದರು. ವೈದೇಹಿ, ಬೌರಿಂಗ್ ಆಸ್ಪತ್ರೆಗೆ ತೆರಳಿದ ಸಿಎಂ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದ್ದಾರೆ. ಅಲ್ಲದೇ ಮೃತರಿಗೆ ಸರ್ಕಾರದಿಂದ 10 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

Related Articles

Back to top button
error: Content is protected !!