ಜನಮನ

4 ಗಂಟೆಗಳ ಹೈವೋಲ್ವೇಜ್ ಮೀಟಿಂಗ್:ಪೂರ್ಣ ಪ್ರಮಾಣದ ಯುದ್ಧಕ್ಕೆ ಸಿದ್ದ

Views: 111

ಕನ್ನಡ ಕರಾವಳಿ ಸುದ್ದಿ: ಆಪರೇಶನ್ ಸಿಂದೂರ ಕಾರ್ಯಾಚರಣೆ ಬಳಿಕ ಪಾಕಿಸ್ತಾನ ಡೋನ್ ಮತ್ತು ಕ್ಷಿಪಣಿ ದಾಳಿಯ ಜತೆಗೆ ಗಡಿಯಲ್ಲಿ ಶೆಲ್ ದಾಳಿ ಮುಂದುವರಿಸಿದೆ. ಇದಕ್ಕೆ ಭಾರತವೂ ತಕ್ಕ ಪ್ರತ್ಯುತ್ತರ ನೀಡಿದೆ. ಶತ್ರು ರಾಷ್ಟ್ರವು ದಾಳಿ ಮುಂದುವರಿಸಿದರೆ ಪೂರ್ಣ ಪ್ರಮಾಣದ ಯುದ್ಧ ನಡೆಸಲು ಸೇನೆಗೆ ಪರಮಾಧಿಕಾರ ನೀಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಭೆಯಲ್ಲಿ ನಿರ್ಧರಿಸಲಾಗಿದೆ ಎನ್ನಲಾಗಿದೆ.

ಸಂಘರ್ಷವನ್ನು ತಗ್ಗಿಸುವುದಿಲ್ಲ ಎಂದು ಪಾಕಿಸ್ತಾನ ಹೇಳಿದ ಬೆನ್ನಿಗೇ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಗೃಹ ಸಚಿವ ಅಮಿತ್ ಷಾ, ರಾಜ್‌ನಾಥ್ ಸಿಂಗ್, ನಿರ್ಮಾಲಾ ಸೀತರಾಮನ್, ಜೈ ಶಂಕರ್ ಅವರು ಪ್ರತ್ಯೇಕವಾಗಿ ಸಭೆ ನಡೆಸಿರುವುದು ಯುದ್ಧದ ಮುನ್ಸೂಚನೆ ಎಂದೇ ಹೇಳಲಾಗಿದೆ.

ಮೋದಿ ಅವರು ಪಾಕಿಸ್ತಾನದ ಜೊತೆ ಗಡಿ ಹಂಚಿಕೊಂಡಿರುವ ಗುಜರಾತ್, ಪಂಜಾಬ್, ರಾಜಸ್ತಾನ ಹಾಗೂ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿ ಪರಿಸ್ಥಿತಿಯ ಆವಲೋಕನ ನಡೆಸಿದ್ದಾರೆ. ಇನ್ನೊಂದೆಡೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೇಶಾದ್ಯಂತ ಎಲ್ಲಾ ಪ್ರಮುಖ ಸಂಸ್ಥೆಗೆಳಲ್ಲಿ ಭದ್ರತೆಯನ್ನು ಹೆಚ್ಚಿಸುವಂತೆ ಸಿಐಎಸ್‌ಎಫ್ (ಕೇಂದ್ರ ಕೈಗಾರಿಕಾ ಭದ್ರತಾ ಪಡೆ)ಗೆ ನಿರ್ದೇಶನ ನೀಡಿದ್ದಾರೆ.

ದೇಶಾದ್ಯಂತ ವಿಮಾನ ನಿಲ್ದಾಣಗಳು, ವಿದ್ಯುತ್ ಸ್ಥಾವರಗಳು, ಪರಮಾಣು ಸ್ಥಾಪನೆ ಗಳು, ಬಾಹ್ಯಾಕಾಶ ಸಂಶೋಧನಾ ಸೌಲಭ್ಯಗಳು ಮತ್ತು ಪ್ರಮುಖ ಸರ್ಕಾರಿ ಕಟ್ಟಡಗಳು ಸೇರಿದಂತೆ ನಿರ್ಣಾಯಕ ಮೂಲ ಸೌಕರ್ಯಗಳನ್ನು ರಕ್ಷಿಸುವ ಕಾರ್ಯವನ್ನು ಸಿಐಎಸ್‌ಎಫ್ ಹೊಂದಿದೆ. ಗಡಿ ಪರಿಸ್ಥಿತಿ ಮತ್ತು ವಿಮಾನ ನಿಲ್ದಾಣದ ಭದ್ರತ ವ್ಯವಸ್ಥೆಗಳನ್ನು ಪರಿಶೀಲಿಸಲು ಶಾ ಅವರು ಬಿಎಸ್ ಎಫ್ ಮಹಾನಿರ್ದೇಶಕರು, ಸಿಐಎಸ್‌ಎಫ್ ಮಹಾನಿರ್ದೇಶಕರು ಮತ್ತು ಗೃಹ ಸಚಿವಾಲ ಯದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

ರಕ್ಷಣಾ ಸಚಿವರ ಸಭೆ: ಇದೇ ವೇಳೆ ಸೇನಾ ಕಾರ್ಯಾಚರಣೆಯ ಬಗ್ಗೆ ಸಿಡಿಎಸ್ ಮತ್ತು ಮೂರು ಸೇನಾ ಮುಖ್ಯಸ್ಥರ ಜೊತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೈವೋಲೇಜ್ ಸಭೆ ನಡೆಸಿದ್ದಾರೆ. ದೆಹಲಿಯಲ್ಲಿ ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ಮತ್ತು ಮೂರು ಸೇನಾ ಮುಖ್ಯಸ್ಥರೊಂದಿಗೆ 2 ಗಂಟೆಗಳ ಕಾಲ ಸಚಿವರು ಸಭೆ ನಡೆಸಿರುವುದು ಕುತೂಹಲ ಮೂಡಿಸಿದೆ. ಈ ವೇಳೆ ಪಾಕ್ ಕ್ಷಿಪಣಿ ಮತ್ತು ಡೋ ನ್ ದಾಳಿಯನ್ನು ಭಾರತ ಯಶಸ್ವಿಯಾಗಿ ತಡೆದ ಬಗ್ಗೆ ಅವರು ಮಾಹಿತಿ ಪಡೆದರು. ರಾಜಧಾನಿ ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ನೌಕರರ ರಜೆಗಳನ್ನು ಎಲ್ಲಾ ನಗರ ಸರ್ಕಾರಿ ನೌಕರರ ರಜೆಗ ರದ್ದುಪಡಿಸಲಾಗಿದೆ. ಇಂಡಿಯಾ ಗೇಟ್‌ನಲ್ಲಿ ಓಡಾಡುವವರನ್ನು ಅಲ್ಲಿಂದ ತೆರಳುವಂತೆ ಸೂಚಿಸಲಾಗಿದೆ. ಜನರು ಆ ಪ್ರದೇಶದಿಂದ ಹೊರಹೋಗುವಂತೆ ಪೊಲೀಸರು ಸೂಚಿಸಿದ್ದಾರೆ.

ಗಡಿ ಪ್ರದೇಶಗಳ ಸಮೀಪವಿರುವ ಅನೇಕ ನಗರಗಳಲ್ಲಿ ವಿದ್ಯುತ್ ಕಡಿತಗೊಳಿಸಲಾಗಿದೆ. ಗಡಿಭಾಗದ ನಾಲ್ಕು ರಾಜ್ಯಗಳಲ್ಲಿ ರಾತ್ರಿಯಿಡೀ ಶೆಲ್ಲಿಂಗ್‌ ನಡೆಯುತ್ತಿದ್ದ ಕಾರಣ ಅಲ್ಲಿ ಬ್ಲ್ಯಾಕ್ ಔಟ್ ಮಾಡಲಾಗಿತ್ತು. ಬೆಳಗ್ಗೆ ವಿದ್ಯುತ್ ಪೂರೈಕೆಯನ್ನು ಮರುಸ್ಥಾಪಿಸಲಾಗಿದೆ.

ನಿಲ್ಲದ ಶೆಲ್ ದಾಳಿ: ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕ್ ಪಡೆಗಳು ಶಾಲೆಗಳು, ಪ್ರಾರ್ಥನಾ ಮಂದಿರ, ದೇಗುಲಗಳ ಮೇಲೆ ಗುರಿ ಇಟ್ಟು ಸತತವಾಗಿ ಶೆಲ್ ದಾಳಿ ನಡೆಸಿವೆ.

Related Articles

Back to top button
error: Content is protected !!