ಕನ್ನಡ ಕರಾವಳಿ ಸುದ್ದಿ : ಬಸ್ರೂರು ಶ್ರೀ ಶಾರದಾ ಕಾಲೇಜು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಡಾ.ಶಿವರಾಮ ಕಾರಂತ್ ಟ್ರಸ್ಟ್ ಉಡುಪಿ ಜಿಲ್ಲೆ ಇವುಗಳ ಸಂಯುಕ್ತ ಆಶಯದಲ್ಲಿ ಅರಿವಿನ ಬೆಳಕು ಉಪನ್ಯಾಸ ಮಾಲೆ – ೯ ಎನ್ನುವ ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀ ಶಾರದಾ ಕಾಲೇಜು ಬಸ್ರೂರು ಇದರ ವಿಶ್ವಸ್ಥ ಮಂಡಳಿಯ ಸದಸ್ಯರಾದ ಶ್ರೀಮತಿ ಅನುಪಮಾ ಎಸ್ ಶೆಟ್ಟಿ ಕಾರಂತರ ಸಮಾಜಮುಖಿ ಮನೋಭಾವಗಳ ಬಗ್ಗೆ ವಿವರಿಸಿ ಕಾರಂತರು ಎಲ್ಲಾ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಎಂದರು.
ಡಾ ಶಿವರಾಮ ಕಾರಂತ್ ಟ್ರಸ್ಟ್ ಉಡುಪಿ ಜಿಲ್ಲೆ ಇದರ ಅಧ್ಯಕ್ಷರಾದ ಡಾ. ಗಣನಾಥ್ ಶೆಟ್ಟಿ ಎಕ್ಕಾರು ಆಶಯ ನುಡಿಗೈದರು. ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ರವಿರಾಜ್ ಶೆಟ್ಟಿ, ಮುಖ್ಯಸ್ಥರು ಕನ್ನಡ ವಿಭಾಗ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತರ ಅಧ್ಯಯನ ಕೇಂದ್ರ ಕಾಪು, ಡಾ. ಶಿವರಾಮ ಕಾರಂತರ ಬರಹಗಳು ಮತ್ತು ಸಮಕಾಲಿನತೆ ಎನ್ನುವ ವಿಷಯದ ಮೇಲೆವಿಚಾರ ಮಂಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಚಂದ್ರಾವತಿ ಶೆಟ್ಟಿ, ಪ್ರಾಂಶುಪಾಲರು ಶ್ರೀ ಶಾರದಾ ಕಾಲೇಜು ಬಸ್ರೂರು ಇವರು ವಹಿಸಿದ್ದರು.
ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕಿಯಾದ ಶ್ರೀಮತಿ ಪ್ರಮೀಳಾ ನಿರೂಪಿಸಿ, ಉಪನ್ಯಾಸಕಿ ಕುಮಾರಿ ಮಮತಾ ವಂದಿಸಿದರು.