ಇತರೆ

ಬೇಳೂರು: ಕೊಯ್ದ ತೆಂಗಿನಕಾಯಿ ಸಾಗಿಸುತ್ತಿದ್ದ ಯುವಕ ತೋಡಿಗೆ ಬಿದ್ದು ಸಾವು

Views: 225

ಕನ್ನಡ ಕರಾವಳಿ ಸುದ್ದಿ: ಕುಂದಾಪುರ ತಾಲೂಕಿನ ಬೇಳೂರು ಗ್ರಾಮದ ಚಾಮ್ತಾಡಿ ಕೈಲೇರಿ ಸಮೀಪ ತೆಂಗಿನ ತೋಟದಲ್ಲಿ ಕಾಯಿ‌ ಕೊಯ್ದು ಸಾಗಾಟ ಮಾಡುವ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕ ನೀರು ತುಂಬಿದ್ದ ತೋಡಿಗೆ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಅಚ್ಲಾಡಿ ಅಂಬೇಡ್ಕರ್ ಕಾಲನಿ ನಿವಾಸಿ ಶರತ್ (32) ಮೃತಪಟ್ಟವರು.

ಈತ ಬುಧವಾರ ಅಚ್ಲಾಡಿಯ ತೋಟವೊಂದಕ್ಕೆ ಕೊಯ್ದು ತೆಂಗಿನಕಾಯಿಯನ್ನು  ಟೆಂಪೋಗೆ ಲೋಡ್ ಮಾಡುವ ಸಂದರ್ಭದಲ್ಲಿ ನಾಪತ್ತೆಯಾಗಿದ್ದ ಹಾಗೂ ಎಲ್ಲ ಕಡೆ ಹುಡಯಕಿದರೂ ಪತ್ತೆಯಾಗಿರಲಿಲ್ಲ. ವಿಪರೀತ ಮಳೆ ಇದ್ದ ಕಾರಣ ಕೊಯ್ದು ಕಾಯಿಯನ್ನು ಟೆಂಪೋಗೆ ಸಾಗಿಸುತ್ತಿದ್ದ ಶರತ್ ಕಾಲು ಜಾರಿ ತೋಡಿಗೆ ಬಿದ್ದಿದ್ದು ಯಾರೂ ಗಮನಿಸದೆ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಈಶ್ವರ ಮಲ್ಪೆ, ಅಗ್ನಿಶಾಮಕ ವ್ಯಾಪಕ ಕಾರ್ಯಚರಣೆಯಲ್ಲಿ ಕೆಲಸ ಮಾಡುತ್ತಿದ್ದ ಸ್ಥಳದ ಪಕ್ಕದಲ್ಲೇ ಹೊಳೆಗೆ ಇದ್ದ ಕಾರಣ ಹೊಳೆಗೆ ಬಿದ್ದಿರಬಹುದು ಎಂದು ಅಂದಾಜಿಸಿ ಬುಧವಾರ ರಾತ್ರಿ ತನಕ ಹಾಗೂ ಗುರುವಾರ ಶವ ದೊರೆಯುವ ತನಕ ಹೊಳೆಯಲ್ಲಿ ವ್ಯಾಪಕ ಶೋಧ ನಡೆಸಲಾಯಿತು. ಅನಂತರ ಗುರುವಾರ ಅಪರಾಹ್ನ ಕೈಲೇರಿ ಸಮೀಪ ತೋಡಿನಲ್ಲಿ ಶವ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ಕೋಟ ಠಾಣೆ ಉಪನಿರೀಕ್ಷಕ ಪ್ರವೀಣ್ ಕುಮಾರ್, ಎ.ಎಸ್.ಐ. ರವಿ ಕುಮಾರ್ ಮತ್ತು ಸಿಬಂದಿಗಳು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

 

Related Articles

Back to top button
error: Content is protected !!