ಯುವಜನ

ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆ!

Views: 183

ಕನ್ನಡ ಕರಾವಳಿ ಸುದ್ದಿ: ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಯಳಚೇಪಲ್ಲಿಯಲ್ಲಿ ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮನೆ ಮುಂದೆ ಆಟವಾಡಲು ಹೋಗಿದ್ದ ವೇಳೆ ಬಾಲಕಿಯರು ನಾಪತ್ತೆಯಾಗಿದ್ದರು. ಈ ಕುರಿತು ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆದರೆ, ಇದೀಗ ಬಾಲಕಿಯರು ಶವವಾಗಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮೃತ ಬಾಲಕಿಯರನ್ನು ಧನ್ಯಾಬಾಯಿ (13), ಚೈತ್ರಾಬಾಯಿ (13) ಎಂದು ಗುರುತಿಸಲಾಗಿದೆ. ಗುರುವಾರ ಮನೆ ಮುಂದೆ ಆಟವಾಡುತ್ತಿದ್ದ ಇಬ್ಬರು ಬಾಲಕಿಯರು ಏಕಾಏಕಿ ನಾಪತ್ತೆಯಾಗಿದ್ದರು. ಈ ಕುರಿತು ಬಾಲಕಿಯರ ಕುಟುಂಬಸ್ಥರು ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ನಾಪತ್ತೆಯಾಗಿದ್ದ ಬಾಲಕಿಯರು ಮುಳಬಾಗಿಲು ತಾಲೂಕಿನ ಕುಪ್ಪಂಪಾಳ್ಯ ಬಳಿಯಿರುವ ಬಾವಿಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ದುಷ್ಕರ್ಮಿಗಳು ಕೊಲೆ ಮಾಡಿ ಬಿಸಾಡಿರಬಹುದು ಅಥವಾ ಬಾಲಕಿಯರು ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನಿಸಿದ್ದು, ಸಾವಿಗೆ ನಿಖರ ಕಾರಣ ಏನು ಎಂಬುದು ಪೋಲಿಸ್ ತನಿಖೆಯಿಂದಲೇ ತಿಳಿಯಬೇಕಿದೆ.

Related Articles

Back to top button