ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ : ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Views: 245
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಜಿಲ್ಲೆಯ ಐದು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಲ್ಲೈ ಮುಗಿಲನ್ ಅವರು ಮಂಗಳೂರು ಉಳ್ಳಾಲ, ಮೂಲ್ಕಿ, ಬಂಟ್ವಾಳ ಹಾಗೂ ಮೂಡುಬಿದಿರೆ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ನೀಡುವ ಆದೇಶ ಹೊರಡಿಸಿದ್ದಾರೆ.
ಉಳಿದಡೆ ತಾಲೂಕಿನ ತಹಶೀಲ್ದಾರುಗಳಿಗೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಅಧಿಕಾರವಿದ್ದು ,ಮಳೆ ಪರಿಸ್ಥಿತಿ ನೋಡಿಕೊಂಡು ರಜೆ ಘೋಷಣೆ ಮಾಡಲು ಸೂಚನೆ ನೀಡಿದ್ದಾರೆ.
ನಿನ್ನೆ ಸುರಿದ ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತ ಗೊಂಡಿದ್ದು,, ನಗರದ ಪ್ರಮುಖ ರಸ್ತೆಗಳು ನರೆಯಿಂದಾಗಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ, ನಗರದ ಪಂಪ್ ವೆಲ್ ಸರ್ಕಲ್ ಗಳಲ್ಲಿ ನೆರೆ ನೀರು ತುಂಬಿ ಜಲಾವೃತವಾಗಿದೆ.
ಇಲ್ಲಿನ ಸುತ್ತಮುತ್ತ ಪ್ರದೇಶದಲ್ಲಿ ರಸ್ತೆಗೆ ನೀರು ನುಗ್ಗಿ ಹರಿಯುತ್ತಿದ್ದು ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮಾತ್ರ ಕಣ್ಣು ಮುಚ್ಚಿ ಕುಳಿತಿದ್ದಾರೆ. ಸ್ಥಳೀಯರು ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡಿದ್ದಾರೆ.