ಧಾರ್ಮಿಕ
ಕುಂಭಾಸಿ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನದಲ್ಲಿ ನ.24 ರಂದು ಬ್ರಹ್ಮರಥೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ
Views: 80
ಕನ್ನಡ ಕರಾವಳಿ ಸುದ್ದಿ:ಕುಂಭಾಸಿ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನದಲ್ಲಿ ನ.24 ರಂದು ಅಷ್ಟೋತ್ತರ ಸಹಸ್ರ ನಾಳಿಕೇರ ಗಣಯಾಗ, ಬ್ರಹ್ಮರಥೋತ್ಸವ ನಡೆಯಲಿದೆ.
ವಾರ್ಷಿಕ ಬ್ರಹ್ಮರಥೋತ್ಸವ ಮತ್ತು ಅಷ್ಟೋತ್ತರ ಸಹಸ್ರ ನಾಳಿಕೇರ ಗಣಯಾಗ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಯ ಬಿಡುಗಡೆ ಶ್ರೀ ಕ್ಷೇತ್ರದ ಸನ್ನಿಧಿ ಯಲ್ಲಿ ಜರುಗಿತು.
ದೇವಳದ ಆಡಳಿತ ಧರ್ಮದರ್ಶಿ ಕೆ.ಶ್ರೀರಮಣ ಉಪಾಧ್ಯಾಯ ಆಮಂತ್ರಣ ಪತ್ರಿಕೆ ಪರ್ಯಾಯ ಅರ್ಚಕ ವ್ಯಾಸ ಉಪಾ ಧ್ಯಾಯ ಹಾಗೂ ಸಹೋದರರು, ಧರ್ಮದರ್ಶಿಗಳು ಮತ್ತು ಆರ್ಚಕ ಸಿಬ್ಬಂದಿ ಹಾಗೂ ಆಡಳಿತ ಮಂಡಳಿ ಸದಸ್ಯರು ಮತ್ತು ದೇವಳದ ಮ್ಯಾನೇಜರ್ ನಟೇಶ್ ಕಾರಂತ್, ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.







