ರಾಜಕೀಯ
444 ರೂ. ಕೋಟಿ ಅಕ್ರಮ: ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
Views: 20
ಕನ್ನಡ ಕರಾವಳಿ ಸುದ್ದಿ: ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಡಿಯಲ್ಲಿನ KSDC ಹಾಗೂ KSWANನಲ್ಲಿ ₹444 ಕೋಟಿ ಹಗರಣದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ಕೆ ದೂರು ಸಲ್ಲಿಕೆಯಾಗಿದೆ.
ಯತೀಂದ್ರ ಜೊತೆಗೆ IAS ಅಧಿಕಾರಿ ಭೂಬಾಲನ್ ವಿರುದ್ಧವೂ ದಾಖಲೆ ಸಮೇತ ಬಿಜೆಪಿ ಮುಖಂಡ ಎನ್ ಆರ್ ರಮೇಶ್ ದೂರು ನೀಡಿದ್ದಾರೆ. 2025ರಲ್ಲಿ ಕರೆದಿದ್ದ ಟೆಂಡರ್ ಪ್ರಕ್ರಿಯೆಯಲ್ಲಿ ಭಾರಿ ಅಕ್ರಮ ನಡೆದಿದೆ. ಅರ್ಹತೆ ಇಲ್ಲದ ಕಂಪನಿಗೆ ಟೆಂಡರ್ ನೀಡಿದ್ದಾರೆ ಎಂದು ದೂರಲಾಗಿದೆ. ಸಚಿವ ಯತೀಂದ್ರ, ಅಧಿಕಾರಿಗಳ ವಿರುದ್ಧ ತನಿಖೆಗೆ ರಮೇಶ್ ಆಗ್ರಹಿಸಿದ್ದಾರೆ.
ಟೆಂಡರ್ ಪ್ರಕ್ರಿಯೆ ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ನಡೆದಿದೆ ಎನ್ನಲಾಗಿದೆ. ಆಗ ಸಿದ್ದರಾಮಯ್ಯ ಅವರು ತಮ್ಮ ಬಳಿಯೇ DPAR ಇಲಾಖೆಯನ್ನು ಉಳಿಸಿಕೊಂಡಿದ್ದರು. ಹೀಗಾಗಿ ಯತೀಂದ್ರ ಸಿದ್ದರಾಮಯ್ಯ ಅಣತಿ ಮೇರೆಗೆ ಟೆಂಡರ್ ನೀಡಿದ ಆರೋಪ ಕೇಳಿಬಂದಿದೆ.






