ಇತರೆ

ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳ ಡಿಕ್ಕಿ-ಜಖಂ

Views: 205

ಕನ್ನಡ ಕರಾವಳಿ ಸುದ್ದಿ: ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಕಾರು ಜಖಂಗೊಂಡು ಪ್ರಾಣಾಪಾಯದಿಂದ ಪಾರಾದ ಘಟನೆ ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ ಕೆನರಾ ಬ್ಯಾಂಕ್ ಬಳಿ ಫೆ.1ರಂದು ಸಂಭವಿಸಿದೆ.

ಕುಂದಾಪುರದಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಕಾರು ಅದೇ ಮಾರ್ಗದಲ್ಲಿ ಮುಂಭಾಗದಲ್ಲಿ ಸಾಗುತ್ತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ.ಪರಿಣಾಮ ಕಾರಿನ ಏರ್ ಬ್ಯಾಗ್‌ ತೆರೆದಿದ್ದು ರಸ್ತೆಯ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ.ಪರಿಣಾಮ ಎರಡು ವಿದ್ಯುತ್ ಕಂಬಗಳು ತುಂಡಾಗಿದೆ.

ಘಟನೆಯ ತೀವ್ರತೆಗೆ ಕಾರಿನ ಹಿಂಬದಿ ಸಂಪೂರ್ಣ ಜಖಂಗೊಂಡಿದ್ದು, ಎರಡು ಟಯರ್ ಗಳು ಸಿಡಿದಿದೆ. ಮಾರುತಿ  ಕಾರಿನ ಚಾಲಕ ಕುಂದಾಪುರದ ನರಸಿಂಹ ಹೊಳ್ಳ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಪರಿಶೀಲಿಸಿ, ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!