ಇತರೆ

ಎರಡು ವರ್ಷದ ಮಗುವಿಗೆ ನೇಣು ಹಾಕಿ ತಾಯಿ ಆತ್ಮಹತ್ಯೆ

Views: 43

ಕನ್ನಡ ಕರಾವಳಿ ಸುದ್ದಿ: ಎರಡು ವರ್ಷದ ಹಸುಳೆಯೊಂದಿಗೆ ತಾಯಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗಂಗಾಮಣಿ (30) ಹಾಗೂ ಅವರ ಪುತ್ರಿ ಪ್ರೇಕ್ಷಾ (2) ಆತ್ಮಹತ್ಯೆಗೆ ಶರಣಾದವರು. ಎಂಟು ವರ್ಷಗಳ ಹಿಂದೆ ಗಂಗಾಮಣಿ ಅವರು ವೃತ್ತಿಯಲ್ಲಿ ಚಾಲಕರಾಗಿರುವ ಯತೀಶ್ ಎಂಬುವವರನ್ನು ಮದುವೆಯಾಗಿದ್ದರು. ಈ ದಂಪತಿಗೆ ಒಟ್ಟು ಮೂವರು ಮಕ್ಕಳಿದ್ದರು. ಇದೀಗ ಕಿರಿಯ ಮಗಳೊಂದಿಗೆ ತಾಯಿ ತನ್ನ ಜೀವನವನ್ನು ಅಂತ್ಯಗೊಳಿಸಿದ್ದಾರೆ.

ಎಂದಿನಂತೆ ಇಂದು ಬೆಳಿಗ್ಗೆ ಗಂಡ ಯತೀಶ್ ಕೆಲಸಕ್ಕೆ ತೆರಳಿದ್ದರು. ಹಿರಿಯ ಮಕ್ಕಳಾದ ವಿನಯ್ (7) ಮತ್ತು ರಕ್ಷಿತಾ (5) ಶಾಲೆಗೆ ಹೋಗಿದ್ದರು. ಮಧ್ಯಾಹ್ನದ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ನೋಡಿ ಗಂಗಾಮಣಿ ಅವರು ಮಗುವಿನೊಂದಿಗೆ ಒಂದೇ ಕುಣಿಕೆಗೆ ನೇಣು ಬಿಗಿದುಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಸಂಜೆ ಸುಮಾರು 6 ಗಂಟೆಗೆ ಹಿರಿಯ ಮಕ್ಕಳಿಬ್ಬರು ಶಾಲೆ ಮುಗಿಸಿ ಮನೆಗೆ ಮರಳಿದ್ದಾರೆ. ಆದರೆ ಮನೆ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಎಷ್ಟೇ ಕೂಗಿದರೂ ತಾಯಿ ಬಾಗಿಲು ತೆಗೆಯದಿದ್ದಾಗ ಗಾಬರಿಗೊಂಡ ಮಕ್ಕಳು ಪಕ್ಕದ ಮನೆಯವರಿಗೆ ವಿಷಯ ತಿಳಿಸಿದ್ದಾರೆ. ನೆರೆಹೊರೆಯವರು ಬಂದು ಬಾಗಿಲು ತೆರೆದು ನೋಡಿದಾಗ ತಾಯಿ ಮತ್ತು ಮಗು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಭೀಕರ ದೃಶ್ಯ ಕಂಡು ಮಕ್ಕಳು ಹಾಗೂ ಗ್ರಾಮಸ್ಥರು ಕಣ್ಣೀರು ಹಾಕಿದ್ದಾರೆ.

ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಚೇಳೂರು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪಶ್ಚಾತ್ತಾಪಕ್ಕೆ ಅಥವಾ ಇನ್ಯಾವುದೇ ಕೌಟುಂಬಿಕ ಕಾರಣಕ್ಕೆ ಗಂಗಾಮಣಿ ಅವರು ಈ ಕಠಿಣ ನಿರ್ಧಾರ ತೆಗೆದುಕೊಂಡರಾ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಸದ್ಯ ಚೇಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Related Articles

Back to top button
error: Content is protected !!