ಯುವಜನ

ಶಿವಮೊಗ್ಗ: ದ್ವಿಚಕ್ರ ವಾಹನಕ್ಕೆ ಟ್ಯಾಂಕರ್ ಡಿಕ್ಕಿ; ಕಾರ್ಕಳದ ವಿದ್ಯಾರ್ಥಿನಿ ಸಾವು

Views: 21

ಕನ್ನಡ ಕರಾವಳಿ ಸುದ್ದಿ: ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ನಡೆದ ಭೀಕರ ಅಪಘಾತದಲ್ಲಿ ಕಾರ್ಕಳ ಮೂಲದ ಲಾವಣ್ಯ(25) ಎಂಬ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಗಂಭೀರವಾಗಿ ಗಾಯಗೊಂಡಿರುವ ಇನ್ನೊಬ್ಬ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೃತಪಟ್ಟ ಅಂತಿಮ ವರ್ಷದ ಪಿಡಿಯಾಟ್ರಿಕ್ ಪಿಜಿ ವಿದ್ಯಾರ್ಥಿನಿ ಕಾರ್ಕಳ ಮೂಲದ ಬೋಳ ಗ್ರಾಮದ ಸತೀಶ್- ಸುನೀತಾ ದಂಪತಿ ಪುತ್ರಿ

ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ವಾಟರ್ ಟ್ಯಾಂಕರ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಟ್ಯಾಂಕರ್ ಅಡಿಯಲ್ಲಿ ಸಿಲುಕಿದ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ.

ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ನಡೆಯುತ್ತಿರುವ ಕಟ್ಟಡ ಕಾಮಗಾರಿಗೆ ಟ್ಯಾಂಕರ್ ಲಾರಿ ನೀರು ಪೂರೈಕೆ ಮಾಡುತ್ತಿತ್ತು.  ವಿದ್ಯಾರ್ಥಿನಿಯರಿಬ್ಬರು ಆಸ್ಪತ್ರೆಯಿಂದ ಹಾಸ್ಟೆಲ್‌ಗೆ ಹೋಗುವಾಗ ದ್ವಿಚಕ್ರ ವಾಹನಕ್ಕೆ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಇದರಿಂದ ಕೆಳಕ್ಕೆ ಬಿದ್ದ ವಿದ್ಯಾರ್ಥಿನಿ ಮೇಲೆ ಟ್ಯಾಂಕರ್ ಹರಿದಿದ್ದು, ಇದರಿಂದಾಗಿ ಗಂಭೀರವಾಗಿ ಗಾಯಗೊಂಡ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ದ್ವಿಚಕ್ರ ವಾಹನದಲ್ಲಿದ್ದ ಮತ್ತೊಬ್ಬ ವಿದ್ಯಾರ್ಥಿನಿ ಬೆಂಗಳೂರು ಜೆ.ಪಿ.ನಗರ ಮೂಲದ ಓವೇರಿಯಾ ಅವರಿಗೂ ಗಂಭೀರ ಗಾಯಗಳಾಗಿವೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಿವಮೊಗ್ಗದ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related Articles

Back to top button
error: Content is protected !!