ಇತರೆ

ಕಾರು-ಲಾರಿ ನಡುವಿನ ಭೀಕರ ಅಪಘಾತ: ಮೂವರು ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಸಾವು

Views: 128

ಕನ್ನಡ ಕರಾವಳಿ ಸುದ್ದಿ: ಕಾರು ಹಾಗೂ ಲಾರಿ ನಡುವಿನ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಪೊಲೀಸ್ ರಿಸರ್ವ್ ಇನ್ಸ್‌ಪೆಕ್ಟರ್‌ಗಳ(ಆರ್ಎಸ್ಐ)ಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹೆಗ್ಗೆರೆ ಬಳಿ ಭಾನುವಾರ ಮುಂಜಾನೆ ಈ ಘಟನೆ ಸಂಭವಿಸಿದೆ. ಅಲ್ಲದೆ, ಘಟನೆಯಲ್ಲಿ ಇನ್ನಿಬ್ಬರು ಎಸ್ಐಗಳಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತ ಆರ್ಎಸ್ಐಗಳನ್ನು ಮಂಜುನಾಥ್, ಅಂಬರೀಷ್ ಹಾಗೂ ಸಚಿನ್ ಎಂದು ಗುರುತಿಸಲಾಗಿದೆ. ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಅವಘಡ ಸಂಭವಿಸಿದೆ. ಪೊಲೀಸ್ ಅಧಿಕಾರಿಗಳು ಬೆಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದರು. ಗಂಭೀರ ಗಾಯಗೊಂಡಿರುವ ಪಿಎಸ್ಐ ಈಶ್ವರ್ ಹಾಗೂ ಆರ್ಎಸ್ಐ ಮಹಾಂತೇಶ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದ ರಭಸಕ್ಕೆ ಲಾರಿಯ ಅಡಿ ಸಿಲುಕಿದ್ದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಬಂಡಾರು, ಐಮಂಗಲ ಠಾಣೆ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

 

 

 

Related Articles

Back to top button
error: Content is protected !!