5ನೇ ಮಹಡಿಯ ಫ್ಲಾಟ್‌ನಿಂದ ಹಾರಿ ಮನೋವೈದ್ಯೆ ಆತ್ಮಹತ್ಯೆ
Views: 108
ಕನ್ನಡ ಕರಾವಳಿ ಸುದ್ದಿ: ಒಂದುವರೆ ವರ್ಷಗಳ ಹಿಂದೆ ವಿಚ್ಛೇದನಕ್ಕೊಳಗಾಗಿದ್ದ ಮನೋವೈದ್ಯೆ ಡಾ.ಹೆಮಿಕಾ ಅಗರ್ವಾಲ್(40) ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.
ವಿಚ್ಛೇದನದಿಂದ ಹೆಮಿಕಾ ತೀವ್ರ ಖಿನ್ನತೆ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇದೇ ನೋವಿನಿಂದ ಹೆಮಿಕಾ ರಾಜ್ ನಗರ ವಿಸ್ತರಣಾ ಪ್ರದೇಶದ ಆಫೀಸರ್ಸ್ ಸಿಟಿ -2 ಸೊಸೈಟಿಯಲ್ಲಿರುವ ತಮ್ಮ ಐದನೇ ಮಹಡಿಯ ಫ್ಲಾಟ್‌ನಿಂದ ಕೆಳಗೆ ಹಾರಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣ ಸ್ಥಳೀಯ ನಿವಾಸಿಗಳು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಡಾ. ಹೆಮಿಕಾ ಆತ್ಮಹತ್ಯೆ ಬಗ್ಗೆ ಆಕೆಯ ತಂದೆ ಡಾ.ಆರ್.ಚಂದ್ರ ಪ್ರತಿಕ್ರಿಯಿಸಿದ್ದು, ಸುಮಾರು 18 ತಿಂಗಳ ಹಿಂದೆ ಮಗಳ ವೈವಾಹಿಕ ಜೀವನ ಮುರಿದುಬಿದ್ದಿತ್ತು. ವಿಚ್ಛೇದನದ ನಂತರ ಆಕೆಯ ಮಾನಸಿಕ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರಿದ್ದು, ಸತತ ಮಾನಸಿಕ ಒತ್ತಡ ಹಾಗೂ ಖಿನ್ನತೆಗೆ ಒಳಗಾಗಿದ್ದಳು ಎಂದು ತಿಳಿಸಿದ್ದಾರೆ.
ಇನ್ನು ಘಟನಾ ಸ್ಥಳದಲ್ಲಿ ಯಾವುದೇ ಡೆತ್‌ನೋಟ್ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಮರಣೋತ್ತರ ಪರೀಕ್ಷೆಯ ವರದಿ ಹಾಗೂ ಕುಟುಂಬಸ್ಥರ ಹೇಳಿಕೆಗಳ ಆಧಾರದ ಮೇಲೆ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.






