ಇತರೆ

5 ಲಕ್ಷ ರೂ.ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ  ಉಪ ವಿಭಾಗಾಧಿಕಾರಿ ಕಾವ್ಯಾರಾಣಿ

Views: 105

ಕನ್ನಡ ಕರಾವಳಿ ಸುದ್ದಿ: ಮೈಸೂರು ಜಿಲ್ಲೆಯ ಹುಣಸೂರು ಉಪ ವಿಭಾಗಾಧಿಕಾರಿ ಕಾವ್ಯಾರಾಣಿ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಜಮೀನು ಸಂಬಂಧಿತ ಖಾತೆ ಬದಲಾವಣೆ ಮಾಡಿಕೊಡಲು ರೂ.10 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಾಗಿ ರೂ.5 ಲಕ್ಷ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಹೆಚ್.ಡಿ. ಕೋಟೆ ತಾಲೂಕಿನ ಜಮೀನು ವಿಚಾರಕ್ಕೆ ಸಂಬಂಧಿಸಿ ಲಂಚ ಕೇಳಿದ ಆರೋಪದ ಮೇರೆಗೆ ಕಾವ್ಯಾರಾಣಿ ಅವರ ಮನೆಯಲ್ಲಿ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ.ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಹೆಚ್.ಡಿ. ಕೋಟೆ ತಾಲೂಕಿನ ಜಮೀನು ವಿಚಾರಕ್ಕೆ ಸಂಬಂಧಿಸಿ ಲಂಚ ಕೇಳಿದ ಆರೋಪದ ಮೇರೆಗೆ ಕಾವ್ಯಾರಾಣಿ ಅವರ ಮನೆಯಲ್ಲಿ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ.

ಘಟನೆ ಕುರಿತು ಲೋಕಾಯುಕ್ತ ಅಧಿಕಾರಿಗಳು ಮುಂದಿನ ತನಿಖೆ ಕೈಗೊಂಡಿದ್ದಾರೆ.

Related Articles

Back to top button
error: Content is protected !!