5 ವರ್ಷ ನಾನೇ ಮುಖ್ಯಮಂತ್ರಿ: ಗೊಂದಲಗಳಿಗೆ ತೆರೆ ಎಳೆದ ಸಿದ್ದರಾಮಯ್ಯ!

Views: 83
ಕನ್ನಡ ಕರಾವಳಿ ಸುದ್ದಿ: ನಮ್ಮ ಸರ್ಕಾರ ಬಂಡೆಯ ರೀತಿ 5 ವರ್ಷಗಳ ಕಾಲ ಇರಲಿದೆ. ಭಾರತೀಯ ಜನತಾ ಪಕ್ಷದವರು ಹಗಲು ಕನಸು ಕಾಣುತ್ತಿದ್ದಾರೆ. ಬಿಜೆಪಿಯವರು ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ಬಿಜೆಪಿಯವರು ಜನರನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ನಾನೇ ಐದು ವರ್ಷಗಳ ಕಾಲ ಸಿಎಂ ಆಗಿರುತ್ತೇನೆ ಎಂದಿದ್ದಾರೆ ಸಿದ್ದರಾಮಯ್ಯ
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಡೆಯಲಿದೆ ಎಂಬ ಊಹಾಪೋಹಗಳಿಗೆ ಸಿಎಂ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ. ಇಂದು ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ಸಂಪುಟ ಸಭೆ ನಡೆಯುತ್ತಿದ್ದು, ಈ ಸಭೆಗೆ ಆಗಮಿಸಿದ ವೇಳೆಯಲ್ಲಿ ಅವರು ಮಾಧ್ಯಮಗಳ ಮುಂದೆ ಈ ಸ್ಪಷ್ಟನೆ ನೀಡಿದರು.
ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗ್ರಾಮದಲ್ಲಿ ಭೋಗ ನಂದೀಶ್ವರ ದೇಗುಲಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವರು ಹಗಲು ಕನಸು ಕಾಣುತ್ತಿದ್ದಾರೆ. 5 ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದರು. ನೀವು 5 ವರ್ಷ ಸಿಎಂ ಆಗಿ ಇರಲ್ಲ ಎಂದು ಪಕ್ಷಗಳು ಹೇಳಿಕೆ ನೀಡುತ್ತಿವೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಅವರೇನು ಹೈಕಮಾಂಡಾ? 5 ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಹೇಳಿದರು.