ರಾಜಕೀಯ

5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ!

Views: 17

ಕನ್ನಡ ಕರಾವಳಿ ಸುದ್ದಿ: ಗುತ್ತಿಗೆದಾರನಿಂದ ಕಮಿಷನ್ ರೂಪದಲ್ಲಿ 5 ಲಕ್ಷ ರೂಪಾಯಿ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಸೆರೆಯಾಗಿದ್ದಾರೆ.

ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಶಾಸಕ ಚಂದ್ರು ಲಮಾಣಿ ಸ್ವತಃ ವೈದ್ಯರು ಕೂಡ ಆಗಿದ್ದು ಬಾಲಾಜಿ ಆಸ್ಪತ್ರೆ ಚಂದ್ರು ಲಮಾಣಿ ಅವರ ಒಡೆತನ ಆಸ್ಪತ್ರೆಯಾಗಿದೆ. ಲೋಕಾಯುಕ್ತ ಅಧಿಕಾರಿಗಳ ದಾಳಿ ವೇಳೆ ಶಾಸಕ ಚಂದ್ರು ಲಮಾಣಿ ಹಾಗೂ ಅವರ ಇಬ್ಬರು ಪಿಎಗಳಾದ ಮಂಜುನಾಥ್ ಹಾಗೂ ಗುರುನಾಯಕ್ ಸಹ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸದ್ಯ ಮೂವರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಅಧಿಕೃತ ಹೇಳಿಕೆಯ ಪ್ರಕಾರ, ರಸ್ತೆಯ ಎರಡೂ ಬದಿಗಳಲ್ಲಿ ತಡೆಗೋಡೆ ನಿರ್ಮಿಸುವ ಸಣ್ಣ ನೀರಾವರಿ ಇಲಾಖೆಯ ಕೆಲಸವನ್ನು ನಿರ್ವಹಿಸಲು ಗದಗದ ಚಿಂಚೋಳಿಯ ಕ್ಲಾಸ್-1 ಗುತ್ತಿಗೆದಾರ ವಿಜಯ್ ಪೂಜಾರ್ ಅವರಿಂದ ಚಂದ್ರು ಲಮಾಣಿ 11 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

ಆದರೆ ಈ ಬಗ್ಗೆ ದೂರುದಾರರು ಲೋಕಾಯುಕ್ತ ಪೊಲೀಸರನ್ನು ಸಂಪರ್ಕಿಸಿದರು. ಭ್ರಷ್ಟಾಚಾರ ತಡೆ ಕಾಯ್ದೆಯಡಿಯಲ್ಲಿ ದೂರು ದಾಖಲಿಸಿಕೊಂಡ ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿ ಆರೋಪಿಗಳನ್ನು 5 ಲಕ್ಷ ರೂ. ಲಂಚ ಪಡೆಯುವಾಗ ಬಂಧಿಸಿದರು.

Related Articles

Back to top button
error: Content is protected !!