ಶಿಕ್ಷಣ
5, 8, 9,11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಸರ್ಕಾರಕ್ಕೆ ಅನುಮತಿ ನೀಡಿದ ಹೈಕೋರ್ಟ್

Views: 54
ಬೆಂಗಳೂರು: 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಏಕಸದಸ್ಯ ಪೀಠದ ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್ ವಿಭಾಗೀಯ ಪೀಠ 5, 8 , 9, 11ನೇ ತರಗತಿ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ.
ಈ ಹಿಂದೆಯೇ ರಾಜ್ಯ ಪಠ್ಯಕ್ರಮವಿರೋ ಶಾಲೆಗಳ 5,8,9 ಮತ್ತು 11ನೇ ತರಗತಿ ಮಕ್ಕಳಿಗೆ ಸ್ಟೇಟ್ ಲೆವೆಲ್ ಬೋರ್ಡ್ ಎಕ್ಸಾಮ್ಸ್ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದು ಮಾಡಿತ್ತು
ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ತೀರ್ಮಾನಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ರವಿ ಹೊಸಮನಿ ನೇತೃತ್ವದ ನ್ಯಾಯಪೀಠ ಈ ತೀರ್ಪು ಪ್ರಕಟಿಸಿತ್ತು.