ಗುಡುಗು ಮಿಂಚು ಸಹಿತ ಮಳೆಯ ಮುನ್ಸೂಚನೆ: 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
Views: 116
ಕನ್ನಡ ಕರಾವಳಿ ಸುದ್ದಿ: ಕರ್ನಾಟಕದಲ್ಲಿ ಬೇಸಿಗೆಯ ಬಿಸಿಲಿನ ನಡುವೆಯೇ ಭಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಭಾರತೀಯ ಹವಾಮಾನ ಇಲಾಖೆಯು ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಅಲ್ಲದೇ ಕೆಲ ಜಿಲ್ಲೆಗಳಿಗೆ ರಾಜ್ಯದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕದ ಕರಾವಳಿ ಮಲೆನಾಡು ದಕ್ಷಿಣ ಮತ್ತು ಉತ್ತರ ಒಳನಾಡಿನ ಅನೇಕ ಜಿಲ್ಲೆಗಳಿಗೆ ಗುಡುಗು ಮಿಂಚು ಸಹಿತ ಮಳೆಯ ಮುನ್ಸೂಚನೆ, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಜಾರಿ
ಹವಾಮಾನ ಇಲಾಖೆ 14 ಜಿಲ್ಲೆಗಳಿಗೆ ʼಯೆಲ್ಲೋ ಅಲರ್ಟ್ʼ ಘೋಷಣೆ ಮಾಡಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ, ಆಗಾಗ್ಗೆ ತುಂತುರು ಮಳೆ ಕಾಣಬಹುದು ಎಂದು ಐಎಂಡಿ ತಿಳಿಸಿದೆ.
ಯಾವೆಲ್ಲಾ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ:
ಹವಾಮಾನ ಇಲಾಖೆ ಪ್ರಕಾರ ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆದ್ದರಿಂದ ಈ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಎಲ್ಲೆಲ್ಲಿ ಜೋರು ಮಳೆಯಾಗುವ ಸಾಧ್ಯತೆ?
ಹವಾಮಾನ ಇಲಾಖೆ ಪ್ರಕಾರ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಉತ್ತರ ಒಳನಾಡಿನ ವಿಜಯಪುರ, ಬಾಗಲಕೋಟೆ, ಕಲ್ಬುರ್ಗಿ, ಬೀದರ್, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಜೋರು ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಗಂಟೆಗೆ 30-40 ಕೀ.ಮಿ ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಿದೆ.






