ವಿಧಾನ ಪರಿಷತ್ತಿಗೆ ನಳಿನ್ ಕುಮಾರ್ ಕಟೀಲ್ ಹೆಸರು ಶಿಫಾರಸು
Views: 51
ಕನ್ನಡ ಕರಾವಳಿ ಸುದ್ದಿ: ಕರ್ನಾಟಕ ವಿಧಾನಸಭೆ ಯಿಂದ ವಿಧಾನ ಪರಿಷತ್ 7 ಸದಸ್ಯ ಸ್ಥಾನಕ್ಕೆ ನಡೆಯುವ ಚುನಾವಣೆಗೆ ಅಧಿಸೂಚನೆ ಪ್ರಕಟಿಸಲಾಗಿದೆ.
,ಬಿಜೆಪಿಯಿಂದ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಐವರು ಹೆಸರನ್ನು ಹೈಕಮಾಂಡ್ಗೆ ಶಿಫಾರಸು ಮಾಡಲಾಗಿದೆ. ನಳಿನ್ ಕುಮಾರ್ ಕಟೀಲ್, ಲಿಂಗರಾಜ್ ಪಾಟೀಲ್, ಎನ್. ಮಹೇಶ್, ರಘು ಕೌಟಿಲ್ಯ ಹಾಗೂ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ಹೆಸರು ಶಿಫಾರಸು ಮಾಡ ಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಜೂ.1 ರಿಂದ ಜೂನ್ 8ರ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿದೆ.
ವಿಧಾನಪರಿಷತ್ ಸದಸ್ಯರಾದ ಗೋವಿಂದರಾಜು (ಕಾಂಗ್ರೆಸ್), ನಾಸಿರ್ ಅಹಮದ್ (ಕಾಂಗ್ರೆಸ್), ಎಂಟಿಬಿ ನಾಗರಾಜ್ (ಬಿಜೆಪಿ), ಪ್ರತಾಪ್ ಸಿಂಹ ನಾಯಕ್ ಕೆ(ಬಿಜೆಪಿ)., ತಿಪ್ಪಣ್ಣಪ್ಪ (ಕಾಂಗ್ರೆಸ್), ಸುನೀಲ್ ವಲ್ಯಾಪುರೆ (ಬಿಜೆಪಿ), ಬಿ.ಕೆ.ಹರಿಪ್ರಸಾದ್ (ಕಾಂಗ್ರೆಸ್) ಅವರ ಅವಧಿ ಜೂ. 30 ರಂದು ಮುಕ್ತಾಯಗೊಳ್ಳಲಿದೆ. ಇವರ ನಿವೃತ್ತಿಯಿಂದ ತೆರವಾಗುವ ಮೇಲ್ಮನೆ ಸದಸ್ಯ ಸ್ಥಾನಕ್ಕೆ ಭಾರತೀಯ ಚುನಾವಣಾ ಆಯೋಗವು ಪ್ರಕಟಣೆ ಹೊರಡಿಸಿದ್ದು, ಅದರಂತೆ ಚುನಾವಣೆ ಪ್ರಕ್ರಿಯೆ ನಡೆಯಲಿದೆ.






