ಯುವಜನ
ಕುಂದಾಪುರ ಈಜಲು ತೆರಳಿ ನೀರಿನಲ್ಲಿ ಮುಳುಗಿ ನಾಪತ್ತೆಯಾದ ವಿದ್ಯಾರ್ಥಿ ಶವ ಪತ್ತೆ
Views: 103
ಕನ್ನಡ ಕರಾವಳಿ ಸುದ್ದಿ: ಕುಂದಾಪುರ ತಾಲೂಕಿನ ಬೇಳೂರು ಗ್ರಾಮದ ಆರ್ಬೆಟ್ಟು ಸುಳಿಗುಂಡಿ ಹಿರೇಹೊಳೆಯಲ್ಲಿ ಈಜಲು ತೆರಳಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದ ಗರಿಕೆಮಠ ಸಾಮರಾಜ್ (21) ಕಾಲೇಜು ವಿದ್ಯಾರ್ಥಿಯ ಮೃತದೇಹ ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ.
ಸ್ಥಳೀಯ ಇಸಿಆರ್ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಸಾಮರಾಜ್, ಜೂನ್ 13ರ ಶನಿವಾರ ಸಂಜೆ ಹೊತ್ತಿಗೆ ಹೊಳೆಗೆ ಈಜಲು ತೆರಳಿದ್ದರು.ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಅವರು ಮುಳುಗಿ ನಾಪತ್ತೆಯಾಗಿದ್ದರು.ಅದೇ ದಿನ ರಾತ್ರಿ ವರೆಗೆ ಹುಡುಕಾಡಿದಾಗ ಮೃತ ದೇಹ ಪತ್ತೆಯಾಗಿರಲಿಲ್ಲ
ಭಾನುವಾರ ಬೆಳಿಗ್ಗೆ ಮುಳುಗುತಜ್ಞ ಈಶ್ವರ್ ಮಲ್ಪೆ ಹಾಗೂ ಅವರ ತಂಡ ಕಾರ್ಯಾಚರಣೆ ನಡೆಸಿದಾಗ ಹೊಳೆಯ ಮಧ್ಯಭಾಗದಲ್ಲಿ ಸಾಮರಾಜ್ ಅವರ ಮೃತದೇಹ ಪತ್ತೆಯಾಗಿದೆ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಯಿತು.






